ವಿರಾಜಪೇಟೆ ಆ.15 NEWS DESK : ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್ ದ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು, ಭಾರತದ ಸ್ವಾತಂತ್ರವು ಹಲವಾರು ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನಗಳ ಸಂಕೇತವಾಗಿದೆ. ನಮ್ಮ ಹಿರಿಯರು ಕಷ್ಟ ಪಟ್ಟು ಹೋರಾಟ ಮಾಡಿ ನಮಗೆ ಸ್ವಾತಂತ್ರವನ್ನು ದೊರಕಿಸಿಕೊಟ್ಟಿದ್ದು, ರಾಷ್ಟ್ರದ ಪ್ರತಿಯೊಬ್ಬರು ಅದನ್ನು ಉಳಿಸಿ ಬೆಳೆಸಬೇಕು ಎಂದರು. ವಿದ್ಯಾರ್ಥಿಗಳು ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿ.ಯು.ಕಾಲೇಜು ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ ಹಾಜರಿದ್ದರು. ವಿದ್ಯಾಸಂಸ್ಥೆಯ ಎನ್. ಎಸ್. ಎಸ್, ಎನ್. ಸಿ. ಸಿ, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು, ಭೋದಕ -ಬೋಧಕೇತರ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.