ಮಡಿಕೇರಿ ಆ.15 NEWS DESK : ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಡಿಕೇರಿಯ ಜಿಲ್ಲಾಸ್ಪತ್ರೆಯ ತೀವ್ರ ನಿಖಾ ಘಟಕದಲ್ಲಿ ದಾಖಲಾಗಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಡಿಸಿಸಿ ಸಮಿತಿಯ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿಯಾಗಿ ಯೋಗ ಕ್ಷೇಮವನ್ನು ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಜರಿದ್ದರು. 









