ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಎಸ್.ಡಿ.ಎಂ.ಸಿ ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿ, ಪ್ರತಿಯೊಬ್ಬರೂ ರಾಷ್ಟ್ರದ ಏಳ್ಗೆಗೆ ಪಣತೊಡಬೇಕು ಎಂದರು.
ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸ್ವಾತಂತ್ರ್ಯ ಗಳಿಸಲು ಶ್ರಮಿಸಿದ ಯೋಧರನ್ನು ನಾವು ಗೌರವಿಸುದರೊಂದಿಗೆ
ರಾಷ್ಟ್ರದ ಏಕತೆ, ಸಮಗ್ರತೆಗೆ ಎಲ್ಲರೂ ಶ್ರಮಿಸಬೇಕು ಎಂದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಕೂಡ್ಲೂರು ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎನ್.ಪವನ್ ಕುಮಾರ್, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಶಿಕ್ಷಕಿ ಎಸ್.ಎಂ.ಗೀತಾ, ಸ್ವಾತಂತ್ರ್ಯ ಚಳವಳಿಯ ಹೋರಾಟ ಹಾಗೂ ರಾಷ್ಟ್ರ ನಾಯಕರ ಕುರಿತು ತಿಳಿಸಿದರು. ಎಸ್.ಡಿ.ಎಂ.ಸಿ ಸದಸ್ಯರಾದ ಕೆ.ಎಸ್.ರಾಜಾಚಾರಿ,ಶೃತಿ, ಶ್ರೀನಿವಾಸಚಾರಿ, ಶಾಲೆಯ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎನ್.ಸುಜಾತ,, ಅನ್ಸಿಲಾ ರೇಖಾ, ಎಸ್ ಎಂ ಗೀತಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ , ಸಿಬ್ಬಂದಿ ಎಂ.ಉಷಾ ಇದ್ದರು. ವಿದ್ಯಾರ್ಥಿನಿ ಕೆ.ಎಂ.ಮಮತ ಕಾರ್ಯಕ್ರಮ ನಿರ್ವಹಿಸಿದರು.
ಮಕ್ಕಳು ದೇಶಭಕ್ತಿ ಗೀತೆ ಸೇರಿದಂತೆ ರಾಷ್ಟ್ರೀಯ ಭಾವೈಕ್ಯತೆ ಪ್ರತಿಬಿಂಬಿಸುವ ಸಮೂಹ ನೃತ್ಯ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನದ ಮಹತ್ವ ಕುರಿತು ಭಾಷಣ ಮಾಡಿದರು.