ಮಡಿಕೇರಿ ಆ.15 NEWS DESK : ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣದ ನಂತರ 26 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಯೋಧರಾದ ನಾಪೋಕ್ಲು ನಿವಾಸಿ ಜೆಸಿಒ ಕಂಗಂಡ ರೋಹನ್ ಈರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಪೋಕ್ಲುವಿನ ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ನ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಬಾಚಮಂಡ ಪಿ.ಲವ ಚಿಣ್ಣಪ್ಪ, ಉಪಾಧ್ಯಕ್ಷರಾದ ಅರೆಯಡ ಎಂ.ರತ್ನ ಪೆಮ್ಮಯ್ಯ, ಕಾರ್ಯದರ್ಶಿ ಚಿಯಕಪೂವಂಡ ಎಂ.ಅಪ್ಪಚ್ಚು, ಜಂಟಿ ಕಾರ್ಯದರ್ಶಿ ಕೇಟೋಳಿರ ಎಸ್.ಹರೀಶ್ ಪೂವಯ್ಯ, ಖಜಾಂಚಿ ಕರವಂಡ ಪಿ.ಬೆಲ್ಲು ಬೆಳ್ಯಪ್ಪ, ನಾಪೋಕ್ಲು ಕೊಡವ ಸಮಾಜದ ಕಲ್ಚರಲ್ ಆಂಡ್ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಅಪ್ಪಾರಂಡ ಸುಧೀರ್ ಹಾಗೂ ರಿಕ್ರಿಯೇಷನ್ ಅಸೋಸಿಯೇಷನ್ ನ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು. 









