ನಾಪೋಕ್ಲು ಆ.16 NEWS DESK : ಮೈಸೂರು ಕೊಡಗು ಗೌಡ ಸಮಾಜ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಭವನದ ಆವರಣದಲ್ಲಿ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವವನ್ನು ಮತ್ತು ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿದ ಗುಡ್ಡೆಮನೆಯ ಅಪ್ಪಯ್ಯ ಗೌಡ, ಕೆದಂಬಾಡಿ ರಾಮಯ್ಯ ಗೌಡ ಮತ್ತು ಇತರ ಮಹನೀಯರನ್ನು ಸ್ಮರಿಸಿದರು. ಸಮಾರಂಭದಲ್ಲಿ ಸಮಾಜದ ನಿಕಟ ಪೂರ್ವ ಅಧ್ಯಕ್ಷ ತೋಟಂಬೈಲು ಮನೋಹರ್ ಮಾತನಾಡಿ, ಸ್ವಾತಂತ್ರ್ಯ ದಿನದ ಮಹತ್ವವನ್ನು ವಿವರಿಸಿದರು. ಕೊಡಗು ಮತ್ತು ದಕ್ಷಣ ಕನ್ನಡ ಜಿಲ್ಲಾ ಗೌಡ ಮಹಿಳಾ ಸಮಾಜದ ವತಿಯಿಂದ ದೇಶಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿದರು. ಸಮಾಜದ ಕಾರ್ಯದರ್ಶಿ ಪೊನ್ನೆಟಿ ನಂದ ಸ್ವಾಗತಿಸಿದರು. ಸಹ ಕಾರ್ಯದರ್ಶಿ ನಡುಮನೆ ಚಂಗಪ್ಪ ವಂದಿಸಿದರು.
ವರದಿ : ದುಗ್ಗಳ ಸದಾನಂದ










