ಸುಂಟಿಕೊಪ್ಪ,ಆ.16 NEWS DESK : ಸ್ವಾತಂತ್ರ್ಯ ದಿನಚಾರಣೆಯನ್ನು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕೆಂದು ಸುಂಟಿಕೊಪ್ಪ ಗ್ರೇಡ್ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಕರೆ ನೀಡಿದ್ದಾರೆ. ಸಂತಮೇರಿ ಶಾಲಾ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು. ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಗಾಂಧಿ, ಜವಹಾರ್‍ಲಾಲ್ ನೆಹರು, ಭಗತ್ ಸಿಂಗ್ ಸೇರಿದಂತೆ ಅನೇಕ ಮಂದಿ ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ಭಾರತ ದೇಶವು ವಿಶ್ವದಲ್ಲೇ ಒಂದು ಅಪರೂಪ. ಆದರೆ ಅದ್ಭುತ ಹಬ,್ಬ ಹರಿದಿನಗಳು, ಜಾತ್ರೆಗಳು, ಜಾತಿ ಜನಾಂಗಗಳು ನೆಲೆಸಿರುವ ದೇಶವಾಗಿದ್ದು, ಬ್ರಿಟಿಷರ ದಬ್ಬಳಿಕೆಯಿಂದ ಹೊರ ಬಂದು ಸ್ವಾತಂತ್ರ್ಯ ಸಂಭ್ರಮದಲ್ಲಿದ್ದು, ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕೆಂದು ಕರೆ ನೀಡಿದರು. ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವ್ಯವಸ್ಥಾಪಕ ವಂ.ಫಾ.ವಿಜಯಕುಮಾರ್ ಮಾತನಾಡಿ, ಭಾರತ ದೇಶವು ಸರ್ವಜನಾಂಗದ ಶಾಂತಿಯ ಎಂಬ ಖ್ಯಾತಿಗೆ ಪಾತ್ರವಾಗಿದ್ದು, ಭಾರತ ದೇಶದ ಭವ್ಯ ಪರಂಪರೆ, ಇತಿಹಾಸ, ಪದ್ಧತಿ, ಇಲ್ಲಿಯ ಜನ ಜೀವನದ ಪ್ರತಿಯೊಂದನ್ನು ಪ್ರೀತಿಸಿ, ಗೌರವಿಸಿ, ಪರಸ್ಪರ ಸೌಹರ್ದತೆಯಿಂದ ಬಾಳಬೇಕೆಂದು ಸಲಹೆ ನೀಡಿದರು. ಸುಂಟಿಕೊಪ್ಪ ಪೊಲೀಸರ ಧ್ವಜ ವಂದನೆಯೊಂದಿಗೆ ರಾಷ್ಟ್ರಧ್ವಜವನ್ನು ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ನೇರವೇರಿಸಿದರು. ಸಂತ ಮೇರಿ, ಸಂತ ಅಂತೋಣಿ, ಸುಂಟಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಬ್ಯಾಂಡ್ ವಾದ್ಯದೊಂದಿಗೆ ಪಥ ಸಂಚಲನ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿ, ಎಲ್ಲಾ ಕ್ಷೇತ್ರದಲ್ಲೂ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳಿದರು. ವಿವಿಧ ಶಾಲೆಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಮಂಜುನಾಥ್, ಆಲಿಕುಟ್ಟಿ, ಪ್ರಸಾದ್ ಕುಟ್ಟಪ್ಪ, ಶಬ್ಬೀರ್, ಶಾಂತಿ, ವಸಂತಿ, ನಾಗರತ್ನ, ಮಾಜಿ ಅಧ್ಯಕ್ಷ ಕೆ.ಇ.ಕರೀಂ, ರೋಸ್‍ಮೇರಿ ರಾಡ್ರಿಗಸ್, ತಾ.ಪಂ.ಮಾಜಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಮಾಜಿ ಉಪಾಧ್ಯಕ್ಷ ಸದಾಶಿವ ರೈ, ಪಂಚಾಯಿತಿ ಲೆಕ್ಕಾ ಪರಿಶೋಧಕಿ ಚಂದ್ರಕಲಾ, ಬಿಲ್‍ಕಲೆಕ್ಟರ್ ಶ್ರೀನಿವಾಸ್, ಪ್ರಜಾ ಪರಿವರ್ತನ ಸಮಿತಿ ಸಂಚಾಲಕ ಮುತ್ತಪ್ಪ,ತಲೆಹೊರೆ ಕಾರ್ಮಿಕ ಕನ್ನಡಾಭಿಮಾನಿ ಸಂಘದ ಅಧ್ಯಕ್ಷ ಸಂತೋಷ್, ತಲೆಹೊರೆ ಕಾರ್ಮಿಕ ಸಂಘದ ಅಧ್ಯಕ್ಷ ಹರೀಶ್, ವಿವಿಧ ಶಾಲಾ-ಕಾಲೇಜುಗಳ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮೂಖ್ಯೋಪಾದ್ಯಾಯರಾದ ಸೆಲ್ವರಾಜ್, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಯನಿ ಸಿಸ್ಟರ್ ಜೂವಿಟ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಗೀತಾ, ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಬಾಲಕೃಷ್ಣ, ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಲತಾ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಸ್ತ್ರೀಶಕ್ತಿ ಸಂಘಗಳ ಪ್ರತಿನಿಧಿಗಳು ಇದ್ದರು. ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಪ್ರಮಾಣ ಪತ್ರ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಎಎಸ್‍ಐ ಪಾರ್ಥ ಅವರನ್ನು ಶಾಲುಹೊದೆಸಿ ಫಲ ತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದ ಮೊದಲಿಗೆ ಸಂತ ಅಂತೋಣಿ ಶಾಲಾ ಮಕ್ಕಳು ಪ್ರಾರ್ಥಿಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕಾರ್ಯದರ್ಶಿ ರಹೆನಾ ಫೈರೋಜ್ ಸ್ವಾಗತಿಸಿದರು. ರಫೀಕ್‍ಖಾನ್ ನಿರೂಪಿಸಿದರು.










