ನೆಲ್ಲೂರು (ಆಂಧ್ರಪ್ರದೇಶ) ಆ.16 NEWS DESK : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ((ISRO) ಶುಕ್ರವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂಮಿಯ ವೀಕ್ಷಣಾ ಉಪಗ್ರಹ-8 (EOS-8) ನ್ನು ಉಡಾವಣೆ ಮಾಡಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ “ಎಸ್ ಎಸ್ ಎಲ್ ವಿ ಯ ಮೂರನೇ ಅಭಿವೃದ್ಧಿ ವಾಹಕ ಹಾರಾಟ ಯಶಸ್ವಿಯಾಗಿದೆ. SSLV-D3 ನಿಖರವಾಗಿ EOS-08 ನ್ನು ಕಕ್ಷೆಗೆ ಸೇರಿಸಿತು. ಇದು ISRO/DOS ನ SSLV ಅಭಿವೃದ್ಧಿ ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಂತ್ರಜ್ಞಾನ ವರ್ಗಾವಣೆಯೊಂದಿಗೆ, ಭಾರತೀಯ ಉದ್ಯಮ ಮತ್ತು ಎನ್ ಎಸ್ ಐಎಲ್ ಇಂಡಿಯಾ ಈಗ ಎಸ್ ಎಸ್ ಎಲ್ ವಿಯನ್ನು ವಾಣಿಜ್ಯ ಕಾರ್ಯಾಚರಣೆಗಳಿಗಾಗಿ ಉತ್ಪಾದಿಸುತ್ತದೆ ಎಂದಿದ್ದಾರೆ.