ನಾಪೋಕ್ಲು ಆ.16 NEWS DESK : ವಿವಿಧ ಶಾಲಾ ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ,ಅಂಗನವಾಡಿಗಳಲ್ಲಿ ಸ್ವಾತಂತ್ರ್ಯ ದಿನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂಡಣ್ಣ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿ ಕೊಟ್ಟರು. ಸಂಸ್ಥೆಯ ನಿರ್ದೇಶಕರಾದ ಕಲ್ಯಾಟಂಡ ಪೂಣಚ್ಚ, ಮಕ್ಕಿ ಸುಬ್ರಹ್ಮಣ್ಯ, ಪ್ರಾಂಶುಪಾಲರಾದ ಬಿ.ಎಂ. ಶಾರದ. ದಿನದ ಮಹತ್ವದ ಬಗ್ಗೆ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಗುಣಗಾನ ಮಾಡಿ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನ ಹೇಳಿದರು. ಈ ಸಂದರ್ಭ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ ,ನಿರ್ದೇಶಕರಾದ ಬೊಪ್ಪಂಡ ಕುಶಾಲಪ್ಪ,ಅಪ್ಪಾರಂಡ ಅಪ್ಪಯ್ಯ, ಅಪ್ಪಚೆಟ್ಟೊಳಂಡ ನವೀನ್ ಅಪ್ಪಯ್ಯ,ಚೌರೀರ ಮಂದಣ್ಣ ಶಾಲಾ ಶಿಕ್ಷಕ ಮತ್ತು ಸಿಬ್ಬಂದಿಗಳು, ಪೋಷಕರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ, ಭಾಷಣ ಸ್ಪರ್ಧೆ, ಛದ್ಮವೇಷ ಸ್ಪರ್ಧೆ ನಡೆಯಿತು.
ವರದಿ : ದುಗ್ಗಳ ಸದಾನಂದ.










