
ಸಿದ್ದಾಪುರ ಆ.16 NEWS DESK : ಇಂಜಲಗೆರೆಯ ಭಗವತಿ ಯುವಕ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉರಗ ರಕ್ಷಕ ಗುಯ್ಯ ಗ್ರಾಮದ ಸುರೇಶ್ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಗ್ರಾಮದ ಹಿರಿಯರಾದ ವೆಂಕಟಪ್ಪ ರೈ, ಮೋಹನ್, ಸುರೇಶ್ ಸೇರಿದಂತೆ ಪ್ರಮುಖರು ಹಾಜರಿದ್ದರು. ಕಳೆದ ಹಲವು ವರ್ಷಗಳಿಂದಲೂ ಸುರೇಶ್ ಪೂಜಾರಿ 13 ಸಾವಿರಕ್ಕೂ ಹೆಚ್ಚು ಹಾವುಗಳನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಜೀವದ ಹಂಗು ತೊರೆದು ವಿಷಕಾರಿ ಹಾವುಗಳನ್ನು ಸುರಕ್ಷಿತವಾಗಿ ಸೆರೆ ಹಿಡಿದು ರಕ್ಷಣೆ ಮಾಡಿರುವ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗಿದೆ ಎಂದು ಸಮಿತಿಯ ಪ್ರಮುಖರು ತಿಳಿಸಿದ್ದಾರೆ.









