ಸುಂಟಿಕೊಪ್ಪ,ಆ.17 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಶ್ರಾವಣ ಮಾಸದ ಹುಣ್ಣಿಮೆಯ ಹಿಂದಿನ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹಲವು ಮನೆಗಳಲ್ಲಿ ಮುತ್ತೈದೆಯರು ಮುಂಜಾನೆ ದೇವರಿಗೆ ನೈವೇದ್ಯವನ್ನು ತಯಾರಿಸಿ ಕಳಸ ವಿಶೇಷ ಪೂಜೆ ಸಲ್ಲಿಸಿದರು. ನೆರೆಹೊರೆಯವರಿಗೆ ಅರಶಿನ, ಕುಂಕುಮ, ಹೂ ನೀಡಿ ಪ್ರಸಾದವನ್ನು ನೀಡುವುದರ ಜೊತೆಯಲ್ಲಿ ಕೆಲವು ಮನೆಗಳಲ್ಲಿ ಅನ್ನದಾನದ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿತ್ತು.










