ಮಡಿಕೇರಿ ಆ.17 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜೈ ಭಾರತ್ ಟ್ರೈನಿಂಗ್ ಸೆಂಟರ್ ಅಂಡ್ ಆರ್ಮಿ ಅಕಾಡೆಮಿ ಮುಖ್ಯಸ್ಥ ಲವ ಪೊನ್ನಪ್ಪ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಮಹತ್ವ, ದೇಶಕ್ಕಾಗಿ ಉತ್ತಮ ರೀತಿಯ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗಬೇಕು. ಉತ್ತಮ ಮಾನವೀಯ ಮೌಲ್ಯಗಳನ್ನು ಮತ್ತು ದೇಶ, ಸಮಾಜ, ಕುಟುಂಬಕ್ಕೆ ಉತ್ತಮ ಪ್ರಜೆಯಾಗಬೇಕೆಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಬೆನಾಡಿಟ್ ಸಾಲ್ಡಾನ ಮಾತನಾಡಿ, ಸಮಾಜದ ಪ್ರತಿಯೊಂದು ರಂಗದಲ್ಲಿಯೂ ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಇಂದಿನ ಯುವಕರು ಹೆಚ್ಚಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುವoತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ವಿದ್ಯಾರ್ಥಿಗಳು, ಎನ್.ಎಸ್.ಎಸ್., ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು, ಉಪನ್ಯಾಸಕ ವೃಂದದವರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಎಲ್ಲರಿಗೂ ಸಿಹಿ ಹಂಚಲಾಯಿತು.










