ಮಡಿಕೇರಿ ಆ.17 NEWS DESK : ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆ ವತಿಯಿಂದ ಆ.20 ರಂದು ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಮಾಡಿಕೇರಿಯಲ್ಲಿ ಆಯೋಜಿಸಲಾಗಿದೆ ಎಂದು ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ, ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವದಲ್ಲಿ ಮಧ್ಯಾಹ್ನ 2 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವರು ಸಾಧಕರನ್ನು ಸನ್ಮಾನಿಸಲಿದ್ದು, ಮುಖ್ಯ ಭಾಷಣಕಾರರಾಗಿ ಮೈಸೂರಿನ ಅರಸು ಜಾಗೃತಿ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ನ ಗೌರವ ಕಾರ್ಯದರ್ಶಿ ಡಾ.ಎಂ.ಜಿ.ಅರಸ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಸುಭಾಷ್ ನಾಣಯ್ಯ, ರಾಜ್ಯ ಅಹಿಂದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ, ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಹೆಚ್.ಎಲ್.ದಿವಾಕರ್, ವಕೀಲರು ಹಾಗೂ ಸರ್ಕಾರಿ ನೋಟರಿ ಬಿ.ಇ.ಜಯೇಂದ್ರ, ಕೊಡಗು ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷ ಕೆ.ಎ.ಯಾಕುಬ್, ಎಂ.ಹೆಚ್.ಅಬ್ದುಲ್ ರಹಮಾನ್ ಹಾಗೂ ವಿವಿಧ ಸಮಾಜಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸನ್ಮಾನಿತರು : ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಹಾಗೂ ನಿವೃತ್ತ ಶಿಕ್ಷಕ ಎನ್.ವೀರಭದ್ರಯ್ಯ, ಸಮಾಜ ಸೇವಕ, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ರಕ್ತದಾನಿ ಹಾಗೂ ಭಾಗಮಂಡಲ ಪೊಲೀಸ್ ಇಲಾಖೆಯ ಹೆಡ್ಕಾನ್ಸ್ಟೇಬಲ್ ಬಿ.ಎಂ.ರಾಮಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ, ನಗರಯೋಜನಾ ಪ್ರಧಿಕಾರದ ಅಧ್ಯಕ್ಷ ಕೆ.ಎ.ಆದಂ, ಸಮಾಜ ಸೇವಕ ಹಾಗೂ ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ಸಮಾಜ ಸೇವಕ ಹಾಗೂ ವಕೀಲರಾದ ಕೆ.ವಿ.ಸುನಿಲ್, ಬೆಟ್ಟಗೇರಿ ಗ್ರಾ.ಪಂ ಅಧ್ಯಕ್ಷೆ ಚಳಿಯಂಡ ಕಮಲ ಉತ್ತಯ್ಯ ಮತ್ತು ಎಸ್.ಎಸ್.ಎಲ್ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಾದ ಐಗೂರು ಸರ್ಕಾರಿ ಪ್ರೌಢಶಾಲೆಯ ಸಿ.ಬಿ.ಬೆಸಿಲ್, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆ.ಆರ್.ಬಬಿತ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಟಿ.ಪಿ.ರಮೇಶ್ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅಹಿಂದ ಒಕ್ಕೂಟದ ಅಧ್ಯಕ್ಷ ತೋರೆರ ಮುದ್ದಯ್ಯ, ಕಾರ್ಯಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು, ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಹಾಗೂ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಉಪಸ್ಥಿತರಿದ್ದರು.