ಸೋಮವಾರಪೇಟೆ ಆ.17 NEWS DESK : ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಹಾಗೂ ಸಿ ಮತ್ತು ಡಿ(ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ) ಭೂಮಿಯನ್ನು ವ್ಯವಸಾಯ ಭೂಮಿ ಎಂದು ಪರಿವರ್ತಿಸಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಆ.19ರ ಪಟ್ಟಣದಲ್ಲಿ ರೈತರ ಬೃಹತ್ ಮೌನ ಪ್ರತಿಭಟನೆ ಮೆರವಣಿಗೆ ನಡೆಯಲಿದೆ ಎಂದು ರೈತ ಹೋರಾಟ ಸಮಿತಿಯ ಸಂಚಾಲಕರಾದ ಕೆ.ಬಿ.ಸುರೇಶ್ ಹೇಳಿದರು. ಅಂದು ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಸಮುದಾಯಭವನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಲಿದ್ದು ಪಟ್ಟಣದ ಜೇಸಿವೇದಿಕೆಯಲ್ಲಿ ಸಮಾವೇಶಗೊಳ್ಳಲಿದೆ. ಮಡಿಕೇರಿ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು, ಡಿಸಿಎಫ್ ಸ್ಥಳಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಬೇಕು ಎಂದು ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಿ ಮತ್ತು ಡಿ ಜಾಗವೆಂದು ಅವೈಜ್ಞಾನಿಕವಾಗಿ ವರ್ಗೀಕರಿಸಿರುವ ಭೂಮಿಯನ್ನು ರಕ್ಷಿತ ಅರಣ್ಯವೆಂದು ಘೋಷಣೆ ಮಾಡಲು ಸರ್ಕಾರ ಮುಂದಾಗಿದೆ. ಅರಣ್ಯ ವ್ಯವಸ್ಥಾಪನ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯಿಂದ ರೈತರಿಗೆ ನೋಟೀಸು ಜಾರಿಯಾಗುತ್ತಿದೆ. ಸಿ ಮತ್ತು ಡಿ ಭೂಮಿ ರಕ್ಷಿತ ಅರಣ್ಯವೆಂದು ಘೋಷಿಸಿದರೆ ರೈತರು ಬೀದಿಪಾಲಾಗಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಶಾಂತಳ್ಳಿ ಹೋಬಳಿಯಲ್ಲಿರುವ ಬಹುತೇಕ ಗ್ರಾಮಗಳಲ್ಲಿ ರೈತರು ಕೃಷಿ ಮಾಡುತ್ತಿರುವ ಭೂಮಿ ಸಿ ಮತ್ತು ಡಿ ಭೂಮಿಯಾಗಿದೆ. ಕಳೆದ ಎರಡು ದಶಕಗಳಿಂದ ಈ ಭೂಮಿಯ ಹಕ್ಕುಪತ್ರಕ್ಕಾಗಿ ರೈತರು ಹೋರಾಟ ಮಾಡುತ್ತಿದ್ದಾರೆ. ಆದರೆ ಕಂದಾಯ ಇಲಾಖೆಯಿಂದ ರಾಜಕಾರಣಿಗಳಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಹೇಳಿದರು. ಸಿ ಮತ್ತು ಡಿ ಜಮೀನು ಅಂದರೆ ವ್ಯವಸಾಯಕ್ಕೆ ಯೋಗ್ಯವಲ್ಲದ, ದಟ್ಟವಾದ ಕಾಡು, ಬೆಟ್ಟ ಗುಡ್ಡಗಳು, ಕಲ್ಲುಬಂಡೆಗಳ ಪ್ರದೇಶವಾಗಿರುತ್ತದೆ. ಆದರೆ ಶಾಂತಳ್ಳಿ ಹೋಬಳಿಯಲ್ಲಿ ಸಿ ಮತ್ತು ಡಿ ಭೂಮಿಯಲ್ಲಿ ಕಾಫಿ, ಕಾಳುಮೆಣಸು, ಬಾಳೆ, ಬೆಳೆಯಲಾಗುತ್ತಿದೆ. ಕೃಷಿ ಭೂಮಿಗೆ ಹಕ್ಕುಪತ್ರ ಕೊಡುವುದು ಸರ್ಕಾರ ಕರ್ತವ್ಯವಾಗಿದೆ. 1995ರಲ್ಲಿ ಅರಣ್ಯ ಭೂಮಿಯನ್ನು ಸರ್ವೇ ಮಾಡದೆ, ಕಚೇರಿಯಲ್ಲಿ ಕುಳಿತುಕೊಂಡ ಕಂದಾಯ ಅಧಿಕಾರಿಗಳು ಪೈಸಾರಿ ಕೃಷಿ ಭೂಮಿಯನ್ನು ಸಿ ಮತ್ತು ಡಿ ಎಂದು ಪರಿವರ್ತಿಸಿದ್ದಾರೆ. ಇವರ ಹೀನಕೃತ್ಯದಿಂದ ರೈತಾಪಿ ವರ್ಗ ತಮ್ಮ ಭೂಮಿಯನ್ನು ಕಳೆದುಕೊಳ್ಳುವಂತ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭ ಜನಪ್ರತಿನಿಧಿಗಳು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಸಿ ಮತ್ತು ಡಿ ಭೂಮಿಗೆ ಹಕ್ಕುಪತ್ರ ಕೊಡಿಸಬೇಕು ಎಂದು ಆಗ್ರಹಿಸಿದರು. ಸಿ ಮತ್ತು ಡಿಯ ಸರ್ವೆ ನಂಬರ್‍ಗಳನ್ನು ಮೀಸಲು ಅರಣ್ಯವಾಗಿ ಘೋಷಿಸಲು ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೆ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಸಿ ಮತ್ತು ಡಿ ಸರ್ವೇ ನಂ ಗಳಲ್ಲಿ ಫಾರಂ 50, 53, 57ನಲ್ಲಿ ಅರ್ಜಿ ಸಲ್ಲಿಸಿರುವ ರೈತರಿಗೆ ಒಂದು ತಿಂಗಳ ಒಳಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಸಂಚಾಲಕರಾದ ಚೇತನ್, ನತೀಶ್ ಮಂದಣ್ಣ, ಗೌಡಳ್ಳಿ ಪೃಥ್ವಿ ಇದ್ದರು.
Breaking News
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*
- *ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ವಲಯ ಇಸ್ಲಾಮಿಕ್ ಕಲೋತ್ಸವ : ವಿರಾಜಪೇಟೆ ಯೂನಿಟ್ ಚಾಂಪಿಯನ್*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*
- *ಕಣಿವೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ*
- *ಪೆನ್ಷನ್ಲೇನ್ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ*
- *ಬ್ರಹ್ಮಗಿರಿ ಸಹೋದಯ ಅಥ್ಲೆಟಿಕ್ಸ್ : ಕೊಡಗು ವಿದ್ಯಾಲಯಕ್ಕೆ ಚಾಂಪಿಯನ್ ಪಟ್ಟ*
- *ಕನಕದಾಸರಿಗೆ ಗೌರವ ಅರ್ಪಿಸಿದ ಸಿಎಂ*
- *ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಮಡಿಕೇರಿ : ಕನ್ನಡ ಅನ್ನದ ಭಾಷೆಯಾಗಬೇಕು : ವೆಂಕಟೇಶ ಪ್ರಸನ್ನ*