ಮಡಿಕೇರಿ ಆ.29 NEWS DESK : ಜನರು ನೀಡಿದ ಬಹುಮತದಿಂದ ಆಯ್ಕೆಯಾದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿತರಗೊಳಿಸಲು ಮೂಡ ಪ್ರಕರಣವನ್ನು ನೆಪ ಮಾಡಿಕೊಂಡು ಬಿಜೆಪಿ ರಾಜಕೀಯ ಷಡ್ಯಂತ್ರ ನಡೆಸಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಕ್ಷ ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಖ್ಯಾತಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಡವರ ಪರವಾಗಿರುವ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜನರಿಗೆ ನೀಡುವ ಮೂಲಕ ಜನಪ್ರಿಯತೆ ಗಳಿಸಿರುವುದನ್ನು ಸಹಿಸದೆ ಮತ್ತು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ತಮಗೆ ಉಳಿಗಾಲವಿಲ್ಲವೆಂದು ಬಿಜೆಪಿ ಹತಾಶೆಗೊಂಡಿದೆ. ಇದೇ ಕಾರಣಕ್ಕೆ ರಾಜ್ಯಪಾಲರನ್ನು ಬಳಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಮೂಡ ಪ್ರಕರಣದಲ್ಲಿ ಎಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಲ್ಲ. ಆದರೂ ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡನೀಯ. ಕೆಲವು ಮಾಜಿ ಮುಖ್ಯಮಂತ್ರಿಗಳ ಹಗರಣದ ಕುರಿತು ತನಿಖೆಗೆ ಅನುಮತಿ ನೀಡಲು ಆಸಕ್ತಿ ತೋರದ ರಾಜ್ಯಪಾಲರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿಚಾರದಲ್ಲಿ ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿರುವುದು ಕಂಡು ಬಂದಿದೆ. ಸಿದ್ದರಾಮಯ್ಯ ಅವರಿಗೆ ಅಪಾರ ಜನಬೆಂಬಲವಿದೆ ಎನ್ನುವ ಕಾರಣಕ್ಕೆ ಅವರಿಗೆ ಮಾನಸಿಕವಾಗಿ ನೋವು ನೀಡಿ ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನಕ್ಕೆ ಬಿಜೆಪಿ ಮುಂದಾಗಿದೆ. ಅಲ್ಲದೆ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ದೇಶದ ಇತರ ಕೆಲವು ರಾಜ್ಯಗಳಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಸಿದ ಬಿಜೆಪಿ, ಕರ್ನಾಟಕದಲ್ಲೂ ತನ್ನ ಚಾಳಿಯನ್ನು ಮುಂದುರೆಸಿದೆ. ರಾಜ್ಯದಲ್ಲಿ ಎಂದಿಗೂ ಸ್ವಂತಬಲದಿಂದ ಅಧಿಕಾರಕ್ಕೆ ಬಾರದ ಬಿಜೆಪಿ ವಾಮಮಾರ್ಗದ ಮೂಲಕವೇ ಅಧಿಕಾರದ ರುಚಿ ಕಂಡಿದೆ. ಇದೀಗ ಬರೋಬರಿ 136 ಸ್ಥಾನ ಬಲದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಟ್ಟ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿ ಮತ್ತೊಮ್ಮೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಚಾರವೆಸಗುತ್ತಿದೆ ಎಂದು ಯಾಕುಬ್ ಆರೋಪಿಸಿದ್ದಾರೆ. ರಾಜ್ಯದ ಸಮಸ್ತ ಜನರು ಸಿದ್ದರಾಮಯ್ಯ ಅವರ ಪರವಾಗಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಯ ಷಡ್ಯಂತ್ರಕ್ಕೆ ಜಯ ಸಿಗುವುದಿಲ್ಲ ಮತ್ತು ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ತಿರುಕನ ಕನಸಾಗಲಿದೆ. ಬಿಜೆಪಿ ಹಾಗೂ ಅದರ ಮಿತ್ರಪಕ್ಷ ಜೆಡಿಎಸ್ ಗೆ ಜನರೇ ತಕ್ಕ ಪಾಠ ಕಲಿಸಲಿದ್ದು, ಕಾಂಗ್ರೆಸ್ ಸರ್ಕಾರ ಮತ್ತಷ್ಟು ಸುಭದ್ರವಾಗಲಿದೆ ಎಂದು ತಿಳಿಸಿದ್ದಾರೆ.