ಮಡಿಕೇರಿ NEWS DESK ಆ.19 : ಕಾಡುಕೋಣವೊಂದು ದಾಳಿ ಮಾಡಿದ ಪರಿಣಾಮ ಹಾಡಿ ನಿವಾಸಿಯೊಬ್ಬರು ಗಾಯಗೊಂಡಿರುವ ಘಟನೆ ತಿತಿಮತಿ ಸಮೀಪದ ಬೊಗ್ಗನ ಹಡ್ಲು ಎಂಬಲ್ಲಿ ನಡೆದಿದೆ. ಜೇನುಕುರುಬರ ತಿಮ್ಮ(45) ಎಂಬುವವರೇ ಕಾಡುಕೋಣದ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ತಿಮ್ಮ ಎಂದಿನ0ತೆ ಮನೆ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಕಾಡುಕೋಣ ದಾಳಿ ಮಾಡಿದೆ. ಕೊಂಬಿನಿ0ದ ತಿವಿದ ಪರಿಣಾಮ ತಿಮ್ಮ ಅವರ ಎಡ ಕಾಲಿಗೆ ಗಂಭೀರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ತಿಮ್ಮ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಷಯ ತಿಳಿದ ತಕ್ಷಣ ಸ್ಪಂದಿಸಿದ ರಾಜ್ಯ ವನ್ಯಜೀವಿ ಸಂರಕ್ಷಣಾ ಸಮಿತಿ ಸದಸ್ಯ ಸಂಕೇತ್ ಪೂವಯ್ಯ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡುಕೋಣ ದಾಳಿ ನಡೆಸಿರುವ ಕುರಿತು ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ಗಮನಕ್ಕೆ ತರಲಾಗಿದೆ. ಗಾಯಾಳುವಿಗೆ ಸೂಕ್ತ ಚಿಕಿತ್ಸೆ ದೊರಕಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಶಾಸಕರು ಸೂಚಿಸಿದ್ದಾರೆ. ವೈದ್ಯರು ಗಾಯಾಳುವಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಿದಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Breaking News
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*
- *ವಿರಾಜಪೇಟೆ : ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ ಉಪನ್ಯಾಸ ಕಾರ್ಯಕ್ರಮ*
- *ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
- *ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ನೂತನ ಪದಾಧಿಕಾರಿಗಳ ನೇಮಕ : ಜಿಲ್ಲಾಧ್ಯಕ್ಷರಾಗಿ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆ*
- *ವಾರ ಭವಿಷ್ಯ : ಯಾರಿಗೆ ಈ ವಾರ ಶುಭ… : ನ.18 ರಿಂದ 24ರ ವರೆಗೆ*
- *ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
- *ಭಾಗಮಂಡಲದಲ್ಲಿ ಕಾವೇರಿ ಆರತಿ*
- *ಬೊಳ್ಳಮ್ಮಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ*