ಸುಂಟಿಕೊಪ್ಪ ಆ.19 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಕಾರ್ಯಕ್ಷೇತ್ರ ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಶ್ರೀ ರಾಮ ಮಂದಿರದ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಮಡಿಕೇರಿ ತಾಲ್ಲೂಕು ಯೋಜನಾಧಿಕಾರಿ ಪುರುಷೋತ್ತಮ್ ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಮಹಿಳೆಯರ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರಲ್ಲದೆ ಮಹಿಳೆಯರಿಗೆ ಜ್ಞಾನವಿಕಾಸ ಕೇಂದ್ರದ ವತಿಯಿಂದ ಸಾಮಾಜಿಕ ಜಾಲತಾಣಗಳ ಮೂಲಕ ಹಲವಷ್ಟು ತರಬೇತಿಗಳನ್ನು ನೀಡಲಾಗುತ್ತಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳುವುದರಿಂದ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದು. ಅಲ್ಲದೇ ಪ್ರತಿ ತಿಂಗಳು ಇತರೆ ವಿಚಾರಗಳ ಕುರಿತು ತರಬೇತಿಯನ್ನು ನೀಡುವುದ ಮೂಲಕ ಪ್ರತಿ ಸದಸ್ಯರಿಗೂ ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಪುರುಷೋತ್ತಮ್ ಹೇಳಿದರು. ದಿನದ ಅಂಗವಾಗಿ ತಲಕಾವೇರಿ ಜ್ಞಾನವಿಕಾಸ ಸದಸ್ಯರಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷರುಗಳಾದ ಖತ್ತೀಜ ಹಾಗೂ ಭವ್ಯ ಬಹುಮಾನಗಳನ್ನು ವಿತರಿಸಿದರು.
ಸಮಾರಂಭದಲ್ಲಿ ಸಂಘದ ಸದಸ್ಯೆ ದೇವಕ್ಕಿ,ಭವ್ಯ ಹಾಜರಿದ್ದರು. ಸೇವಾ ಪ್ರತಿನಿಧಿ ಯಶೋಧ ನಿರೂಪಿಸಿ, ಭವಾನಿ ವಂದಿಸಿದರು.
Breaking News
- *ಕುಶಾಲನಗರ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ*
- *ನ.17 ರಂದು ಎಲ್ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯಲ್ಲಿ ಚಿತ್ರಕಲಾ ಸ್ಪರ್ಧೆ*
- *ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಕೊಡಗು ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು ಆಯ್ಕೆ*
- *ಅರೆಕಾಡಿನಲ್ಲಿ ಗಮನ ಸೆಳೆದ ‘ನಾಡೊರ್ಮೆ’ ಕಾರ್ಯಕ್ರಮ : ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಮತ್ತಷ್ಟು ಶ್ರಮಿಸಿ : ಶಾಸಕ ಡಾ.ಮಂತರ್ ಗೌಡ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ : ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ : ಎಸ್ಪಿ ಕೆ.ರಾಮರಾಜನ್*
- *”ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣ : ಸಂಸದ ಯದುವೀರ್ ಭರವಸೆ*
- *ಹಾಕತ್ತೂರು, ಮೇಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಂಸದ ಯದುವೀರ್*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನಾಪೋಕ್ಲು : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*