ವಿರಾಜಪೇಟೆ ಆ.19 NEWS DESK : ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಆ.22 ರಂದು ಪಾವನ ಪರ್ವ ಶ್ರೀ ರಕ್ಷಾ ಬಂಧನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ನಡೆಯಲಿದೆ. ಅಂದು ಸಂಜೆ 3.30 ಗಂಟೆಗೆ ಆರಂಭಗೊಳ್ಳಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪರಮಾತ್ಮನ ಶ್ರೀ ರಕ್ಷೆಯನ್ನು ಕಟ್ಟಿಸಿಕೊಂಡು ಪ್ರಸಾದ ಸ್ವೀಕರಿಸುವಂತೆ ಸಂಸ್ಥೆಯ ಮುಖ್ಯಸ್ಥರಾದ ಕೋಮಲ ಅಕ್ಕ ಕೋರಿದ್ದಾರೆ.









