ಸೋಮವಾರಪೇಟೆ ಆ.19 NEWS DESK : ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ, ಸಿ ಮತ್ತು ಡಿ ಭೂಮಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಸೋಮವಾರಪೇಟೆ ರೈತಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ತಾಲ್ಲೂಕು ಒಕ್ಕಲಿಗರ ಸಮುದಾಯ ಭವನದಿಂದ ಪಟ್ಟಣದಲ್ಲಿ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ರೈತರು ವಿವೇಕಾನಂದ ಸರ್ಕಲ್ ಮೂಲಕ ತೆರಳಿ, ಜೇಸಿ ವೇದಿಕೆಯಲ್ಲಿ ಸಮಾವೇಶಗೊಂಡರು. ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ರೈತರ ಪ್ರತಿಭಟನೆಗೆ ಸಹಕಾರ ನೀಡಿದರು. ಸಿ ಮತ್ತು ಡಿ ಭೂಮಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಾಗೂ ಸಿ ಆ ್ಯಂಡ್ ಡಿ ಭೂಮಿಯನ್ನು ಸಾಮಾಜಿಕ ಅರಣ್ಯ ಎಂದು ಘೋಷಿಸಲು ಸಿದ್ದತೆ ನಡೆಯುತ್ತಿರುವುದರಿಂದ ಸಾವಿರಾರು ರೈತ ಕುಟುಂಬಗಳು ಆಸ್ತಿಯನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿಯನ್ನು ಸರ್ವೇ ಮಾಡಿ ಗುರುತಿಸಿ ಸಾಮಾಜಿಕ ಅರಣ್ಯ ಮಾಡಲಿ. ಕೃಷಿ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡಲಿ ಈ ಬಗ್ಗೆ ಕಾನೂನು ಹೋರಾಟವನ್ನು ಮುಂದುವರಿಸಬೇಕು ಎಂದು ಸಮಿತಿ ಸಂಚಾಲಕ ಬಿ.ಜೆ.ದೀಪಕ್ ಹೇಳಿದರು. ನೂರಾರು ವರ್ಷಗಳಿಂದ ಸಿ ಮತ್ತು ಡಿ ಜಾಗದಲ್ಲಿ ರೈತರು ಕೃಷಿ ಮಾಡಿಕೊಂಡು ಬರುತ್ತಿರುವ ಭೂಮಿಗೆ ಹಕ್ಕುಪತ್ರ ಸಿಗಲೇಬೇಕು ಎಂದು ಶಾಸಕ ಡಾ.ಮಂತರ್‍ಗೌಡ ಹೇಳಿದರು. ಸುಪ್ರ್ರಿಂ ಕೋರ್ಟ್ ನಿರ್ದೇಶನದಂತೆ ಕೆಲವು ಘಟನೆಗಳು ನಡೆದಿವೆ. ಸಿ ಆ ್ಯಂಡ್ ಡಿ ಜಾಗದ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಗಳು, ಅರಣ್ಯ ಸಚಿವರು ಹಾಗು ಹಿರಿಯ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟು, ಸರ್ಕಾರದಿಂದ ರೈತರ ಪರವಾಗಿ ಸುಫ್ರೀಂಕೋರ್ಟ್‍ಗೆ ಅಫಿಡೆವಿಟ್ ಸಲ್ಲಿಸವಂತೆ ಮಾಡಬೇಕಾಗಿದೆ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚು ಚರ್ಚೆ ಮಾಡಲು ಸಾಧ್ಯವಿಲ್ಲ. ಜಿಲ್ಲೆಯ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ರೈತರ ಸಿ ಆ್ಯಂಡ್ ಡಿ ಭೂಮಿಯನ್ನು ತೆರವು ಮಾಡಿಸಲು ಬಿಡುವುದಿಲ್ಲ. ಬಿಜೆಪಿ ಸರ್ಕಾರವಿದ್ದಾದ ಹೆಚ್ಚಿನ ಹಕ್ಕುಪತ್ರಗಳನ್ನು ಕೊಡಲಾಗಿದೆ. ಕಸ್ತೂರಿ ರಂಗನ್, ಗಾಡ್ಗಿಳ್ ವರದಿಯನ್ನು ತಡೆಹಿಡಿದಿದ್ದೇವೆ. ಪೈಸಾರಿ ದಜಮೀನು ಮತ್ತು ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯವೆಂದು ಘೋಷಣೆಗೆ ಅರಣ್ಯ ಇಲಾಖೆ ಹೊರಡಿಸಿರುವ ಉದ್ಘೋಷಣೆಯನ್ನು ವಾಪಾಸ್ಸು ಪಡೆಯುವ ಅಧಿಕಾರ ಅರಣ್ಯ ಸಚಿವರಿಗೆ ಇದೆ ಎಂದು ಹೇಳಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಅವರು ಮಾತನಾಡಿ, ಕೊಡಗಿನ ನಿಯೋಗ ಮುಖ್ಯಮಂತ್ರಿಗಳನ್ನು, ಅರಣ್ಯ ಸಚಿವರನ್ನು ಭೇಟಿ ಆಗಬೇಕು. ಸುಪ್ರ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಬೇಕು. ಕಸ್ತೂರಿ ರಂಗನ್ ವರದಿ ಅನುಷ್ಠಾನವನ್ನು ಕೇಂದ್ರ ಸರ್ಕಾರ ಪುನರ್‍ವಿಮರ್ಶೆ ಮಾಡಬೇಕಿದೆ. ಈ ಬಗ್ಗೆ ರಾಜ್ಯ ಸರ್ಕಾರ ಒತ್ತಡ ಹಾಕಬೇಕಿದೆ ಎಂದರು. ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯಿಂದ ಸಿ ಆ್ಯಂಡ್ ಡಿ ಭೂಮಿಯ ಜಂಟಿ ಸರ್ವೆ ಆಗಬೇಕು ಎಂದು ಆಗ ವ್ಯವಸಾಯಕ್ಕೆ ಯೋಗ್ಯವಲ್ಲದ ಭೂಮಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಬಿ.ಪಿ.ಅನಿಲ್ ಕುಮಾರ್ ಹೇಳಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್, ರೈತ ಮುಖಂಡ ಎಸ್.ಬಿ.ಭರತ್ ಕುಮಾರ್ ಮಾತನಾಡಿದರು.
Breaking News
- *ಬೇಟೋಳಿಯಲ್ಲಿ ಮಕ್ಕಳ ಗ್ರಾಮಸಭೆ*
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು-ಸಿದ್ದಾಪುರ ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*