ಮಡಿಕೇರಿ (NEWS DESK) ಆ.20 : ಸಮಾಜದ ಎಲ್ಲಾ ವರ್ಗಗಳಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕೀಕರಣವನ್ನು ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷ ಆ.20 ರಂದು ಆಚರಿಸಲಾಗುವ ಸದ್ಭಾವನಾ ದಿನವನ್ನು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿ, ಜಿಲ್ಲೆಯ ಎಲ್ಲಾ ಠಾಣೆ ಹಾಗೂ ಕಚೇರಿಗಳಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸದ್ಭಾವನಾ ದಿನಾಚರಣೆಯ ಅಂಗವಾಗಿ ಎಲ್ಲರಿಗೂ ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಾಗಳು ಹಾಗೂ ಕಚೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.











