ಸುಂಟಿಕೊಪ್ಪ NEWS DESK ಆ.21 : ಶ್ರೀಗೌರಿ ಗಣೇಶ ಹಬ್ಬವನ್ನು ಆಚರಣೆಯ ಸಂದರ್ಭ ಆಯೋಜಕರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸುವುದು, ಹಬ್ಬದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದು ಮುಖ್ಯ, ಅದೇ ರೀತಿಯಲ್ಲಿ ಕಾನೂನು ಪರಿಪಾಲಿಸಬೇಕು. ಯಾವುದೇ ಅನಾಹುತಗಳು ಸಂಭವಿಸಿದರೆ ಆಯೋಜಕರೆ ನೇರ ಹೊಣೆಗಾರರು ಎಂದು ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀಗೌರಿ ಗಣೇಶ ಆಚರಣಾ ಸಮಿತಿಗಳ ಸಭೆಯಲ್ಲಿ ಮಾತನಾಡಿದ ಅವರು ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಗಣೇಶೋತ್ಸವ ಸಮಿತಿಗಳು ಪಾಲಿಸಬೇಕು. ವಿವಿಧ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಮುಂಜಾಗೃತಾ ಕ್ರಮವಾಗಿ ಶ್ರೀಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿ ಕ್ಯಾಮರಗಳನ್ನು ಅಳವಡಿಸಬೇಕು. ಇದರಿಂದ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಸಹಕರಿಯಾಗಲಿದೆ ಎಂದರು.
ವಿದ್ಯುತ್ ಸಂಪರ್ಕವನ್ನು ಅಳವಡಿಸಿಕೊಳ್ಳುವಾಗ ಸೂಕ್ಷ್ಮತೆಯನ್ನು ಗಮನದಲ್ಲಿರಿಸಿಕೊಳ್ಳಬೇಕು. ಶ್ರೀಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಸಮಿತಿಯ ಇಬ್ಬರು ಪದಾಧಿಕಾರಿಗಳು ಕಾವಲು ಇರಬೇಕು. ಸ್ಥಳದ ಪೂರ್ವಾಪರ ಮಾಹಿತಿಯನ್ನು ಹೊಂದಿರಬೇಕು. ವಿಸರ್ಜನೆಯ ವೇಳೆ ಈಜು ಬಲ್ಲವರು ಇರಬೇಕು ಮತ್ತು ಸೂಕ್ತ ಭದ್ರತೆಯ ಜಾಕೆಟ್ ಕಡ್ಡಾಯವಾಗಿ ತೊಟ್ಟಿರಬೇಕು. ಮೂರ್ತಿಗಳ ವಿಸರ್ಜಿನೆಯ ವೇಳೆ ಅಲಂಕೃತ ಮಂಟಪ ಮೆರವಣಿಗೆ ತೆರಳುವ ಮಾರ್ಗಗಳ ಮಾಹಿತಿ ಮತ್ತು ನಿಗಧಿಗೊಂಡಿರುವ ಸಮಯವನ್ನು ಪೊಲೀಸ್ ಠಾಣೆಗೆ ತಿಳಿಸಬೇಕು ಎಂದು ಸುಂದರ್ ರಾಜ್ ಅವರು ಸೂಚನೆ ನೀಡಿದರು. ಕುಶಾಲನಗರ ವೃತ್ತನಿರೀಕ್ಷಕ ರಾಜೇಶ್ ಕೋಟ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಅವರು ಸರಕಾರದಿಂದ ಹೊರಡಿಸಿರುವ ನಿಯಮಗಳ ಮಾಹಿತಿಯನ್ನು ನೀಡಿದರು.
ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್.ಐ ಭಾರತಿ, ಪೊಲೀಸ್ ಸಿಬ್ಬಂದಿಗಳು, ವಿವಿಧ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*