ಕುಶಾಲನಗರ NEWS DESK ಆ.21 : ಹುಣ್ಣಿಮೆ ಅಂಗವಾಗಿ ಭಾಗಮಂಡಲ ಸಂಗಮದಿಂದ ಹಾರಂಗಿ ಸಂಗಮ ತನಕ ಕಾವೇರಿ ನದಿ ತಟದ ಹಲವು ಸ್ಥಳಗಳಲ್ಲಿ ನಮಾಮಿ ಕಾವೇರಿ ತಂಡದ ಮೂಲಕ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಭಾಗಮಂಡಲ ಕುಂದಚೇರಿ, ಕಕ್ಕಬೆ, ಗುಹ್ಯ ಕೂಡುಗದ್ದೆ, ಕುಶಾಲನಗರ, ಕೊಪ್ಪ, ಗುಮ್ಮನ ಕೊಲ್ಲಿ,ಮುಳ್ಳುಸೋಗೆ, ಕೂಡು ಮಂಗಳೂರು ಮತ್ತಿತರ ಸ್ಥಳಗಳಲ್ಲಿ ನಮಾಮಿ ಕಾವೇರಿ ತಂಡದ ಸ್ಥಳೀಯ ಸದಸ್ಯರು ನದಿಗೆ ಪೂಜೆ ಸಲ್ಲಿಸಿ ಆರತಿ ಬೆಳಗಿ ಸ್ವಚ್ಛ ಕಾವೇರಿಗಾಗಿ ಮತ್ತು ನಾಡಿನ ಕ್ಷೇಮಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ತಂಡ ಮತ್ತು ಕಾವೇರಿ ಬಳಗದ ಸದಸ್ಯರು ಪಾಲ್ಗೊಂಡಿದ್ದರು. ಕುಶಾಲನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕುಶಾಲನಗರ ತಾಲೂಕು ಎಸ್ ಎನ್ ಡಿಪಿ ಶಾಖೆ ಮತ್ತು ಶ್ರೀ ಮುತ್ತಪ್ಪ ದೇವಾಲಯ ಆಡಳಿತ ಮಂಡಳಿ ಸಹಯೋಗದೊಂದಿಗೆ ನಮಾಮಿ ಕಾವೇರಿ ತಂಡದ ಸದಸ್ಯರು 162 ನೆಯ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಕುಂಕುಮಾರ್ಚನೆ ಅಷ್ಟೋತ್ತರ ನಂತರ ನದಿಗೆ ಆರತಿ ಬೆಳಗಿದರು. ಈ ಸಂದರ್ಭ ನಮಾಮಿ ಕಾವೇರಿ ತಂಡದ ಪ್ರಮುಖರಾದ ವನಿತಾ ಚಂದ್ರಮೋಹನ್ ಮಂಡೆಪಂಡ ಬೋಸ್ ಮೊಣ್ಣಪ್ಪ , ಡಿ ಆರ್ ಸೋಮಶೇಖರ್, ಧರಣಿ ಸೋಮಣ್ಣ ಹಾಗೂ ಕುಶಾಲನಗರ ಎಸ್ಎನ್ ಡಿಪಿ ಶಾಖೆಯ ಅಧ್ಯಕ್ಷರಾದ ಗಣೇಶ್ ಕಾರ್ಯದರ್ಶಿ ಅನೀಶ್ ಸದಸ್ಯರಾದ ಕಿಶೋರ್ ಉದಯ್, ಮಹಿಳಾ ಘಟಕದ ಅಧ್ಯಕ್ಷರಾದ ಸವಿತಾ ಕಾರ್ಯದರ್ಶಿ ಶ್ರೀಜಾ ಮತ್ತು ನಿರ್ದೇಶಕರುಗಳು ಇದ್ದರು. ಪೂಜಾ ಕಾರ್ಯಕ್ರಮಕ್ಕೂ ಮುನ್ನ ಪ್ರವಾಹ ಹಿನ್ನೆಲೆಯಲ್ಲಿ ಕೆಸರಿನಿಂದ ತುಂಬಿದ್ದ ಕಾವೇರಿ ನದಿ ಪಾತ್ರದ ಸ್ವಚ್ಛತಾ ಕಾರ್ಯ ಮಾಜಿ ಕಾರ್ಯದರ್ಶಿ ಕೆ ಆರ್ ರಾಜೇಶ್ ಅವರ ನೇತೃತ್ವದಲ್ಲಿ ನಡೆಯಿತು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*