ವಿರಾಜಪೇಟೆ ಆ.22 NEWS DESK : ಯರವ ಸಮಾಜದ ವತಿಯಿಂದ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಜರ್ಸಿಗಳನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯರವ ಸಮಾಜದ ಅಧ್ಯಕ್ಷ ಸಿದ್ದಪ್ಪ ಅವರು ಶಾಲೆಯ ಒಟ್ಟು 15 ಕ್ರೀಡಾಪಟುಗಳಿಗೆ ಜರ್ಸಿಗಳನ್ನು ವಿತರಿಸಿದರು. ನಂತರ ಮಾತನಾಡಿದ ಸಿದ್ದಪ್ಪ, ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ಅವಕಾಶದ ಕೊರತೆ ಹಿನ್ನೆಲೆಯಲ್ಲಿ ಬೆಳಕಿಗೆ ಬರಲು ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡ ಎರವ ಸಮಾಜ, ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಗಳನ್ನು ಗುರುತಿಸಿ ಅಲ್ಲಿನ ಕ್ರೀಡಾಪಟುಗಳನ್ನು ಉತ್ತೇಜಿಸಲು ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎರವ ಸಮಾಜದ ಉಪಾಧ್ಯಕ್ಷ ಪಿ.ಎಂ.ರಘು, ಸಮಿತಿ ಸದಸ್ಯರಾದ ಶಶಿ, ತಿತಿಮತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಸಿ.ಎಂ. ರಾಘವೇಂದ್ರ, ನವೀನ್ ಬಾಸಿತ್ ಮೊದಲಾದವರು ಪಾಲ್ಗೊಂಡಿದ್ದರು.









