ಮಡಿಕೇರಿ ಆ.21 NEWS DESK : ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತಿನ ಕೊಡಗು ಘಟಕದ ವತಿಯಿಂದ ಸೆ.22 ರಂದು ನಗರದಲ್ಲಿ ‘ಫ್ಯಾಷನ್ ಶೋ’ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ನಯನ ಹರಿಶ್ಚಂದ್ರ ಅವರು ನಗರದ ಪತ್ರಿಕಾ ಭವನದಲ್ಲಿ ಕಾರ್ಯಕ್ರಮದ ಕುರಿತು ವಿವರಗಳನ್ನು ನೀಡಿ, ನಗರದ ರಾಜಾಸೀಟು ಬಳಿಯ ಕುಬೇರ ಪಾರ್ಟಿ ಹಾಲ್‍ನಲ್ಲಿ ಅಂದು ಮಧ್ಯಾಹ್ನ 3 ರಿಂದ 8 ಗಂಟೆಯವರೆಗೆ ಫ್ಯಾಷನ್ ಶೋ ಒಳಗೊಂಡಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಕೊಡಗಿನ ಗ್ರಾಮೀಣ ಪ್ರತಿಭೆಗಳಿಗೆ ಚಲನಚಿತ್ರ ಮತ್ತು ಮಾಡೆಲಿಂಗ್ ಕ್ಷೇತ್ರದ ಬಗ್ಗೆ ಪರಿಚಯಿಸಿ, ಆ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರೇಪಣೆ ನೀಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 4 ರಿಂದ 11 ವರ್ಷದ ಮಕ್ಕಳು ಮತ್ತು 12 ರಿಂದ 17 ವರ್ಷದ ವಿಭಾಗ, 18 ರಿಂದ 30 ವರ್ಷದೊಳಗಿನ ವಿಭಾಗ ಮತ್ತು 25 ರಿಂದ 55 ವರ್ಷದೊಳಗಿನ ವಿಭಾಗಗಳಲ್ಲಿ ಫ್ಯಾಷನ್ ಶೋವನ್ನು ಆಯೋಜಿಸಲಾಗಿದೆ. ಇದರಲ್ಲಿ 25 ವರ್ಷದೊಳಗಿನವರಿಗೆ ಮಾಡರ್ನ್ ಮತ್ತು ಸಾಂಪ್ರದಾಯಿಕ ಉಡುಪಿನ ಫ್ಯಾಷನ್ ಶೋ ಮತ್ತು 25 ವರ್ಷ ಮೇಲ್ಪಟ್ಟವರಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಫ್ಯಾಷನ್ ಶೋವನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಸ್ಪರ್ಧಿಗಳಿಗೆ ಸ್ಮರಣಿಕೆ ಮತ್ತು ಶಾಲನ್ನು ನೀಡಿ ಗೌರವಿಸಲಾಗುತ್ತದೆಂದು ಹೇಳಿದರು. ಫ್ಯಾಷನ್ ಶೋನಲ್ಲಿ ಪಾಲ್ಗೊಳ್ಳುವವರಿಗೆ 500 ರೂ. ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಆಸಕ್ತರು ಆ.31 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ಅಧ್ಯಕ್ಷರು ಮೊ.9448201227 ನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಪರಿಷತ್ತಿನ ಕಾರ್ಯದರ್ಶಿ ತೆಕ್ಕಡೆ ಗುಲಾಬಿ ಜನಾರ್ಧನ್ ಅವರು ಮಾತನಾಡಿ, ಜಿಲ್ಲೆಯ ಮಕ್ಕಳಿಗೆ ತಮ್ಮ ಪ್ರತಿಭಾ ಅನಾವರಣಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಐವರು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆಂದರು. ಸುದ್ದಿಗೋಷ್ಠಿಯಲ್ಲಿ ಪರಿಷತ್ತಿನ ಖಜಾಂಚಿ ಡಾ.ತೇಜಸ್ ಪೃಥ್ವಿರಾಜ್ ಹಾಗೂ ಸದಸ್ಯರಾದ ಹರಿಣಿ ಪ್ರಭಾಕರ್ ಉಪಸ್ಥಿತರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*