ಪುತ್ತೂರು ಆ.22 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆ.24 ರಂದು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಇಲ್ಲಿ ಪದವಿ ಪ್ರಧಾನ ಮಾಡಲಾಗುತ್ತದೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ರ್ಯಾಂಕ್ ಗಳಿಸಿರುವ ಕೇಶವ ಪ್ರಜ್ವಲ್.ಪಿ ಹಾಗೂ 5ನೇ ರ್ಯಾಂಕ್ ಗಳಿಸಿರುವ ಕೆ.ಪಲ್ಲವಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ. ಅಂದು ಬೆಳಿಗ್ಗೆ 10.30ಕ್ಕೆ ನಡೆಯುವ ಈ ಸಮಾರಂಭಕ್ಕೆ ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಕನಿಷ್ಕ.ಎಸ್.ಚಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ. ತಿಳಿಸಿದ್ದಾರೆ.
Breaking News
- *ಹಾಡಿಯ ಜನರು ಆಯೋಜಿಸುವ ಕಾರ್ಯಕ್ರಮಗಳಿಗೆ ಅನುಕೂಲ : ಸೌಂಡ್ ಸಿಸ್ಟಮ್ ಕೊಡುಗೆ ನೀಡಲಿರುವ ASP*
- *ಮಡಿಕೇರಿ ದಸರಾದಲ್ಲಿ ಉಪೇಂದ್ರ ವಿಜಯ*
- *ಮಡಿಕೇರಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ*
- *ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
- *ಮಡಿಕೇರಿಯಲ್ಲಿ ವಿಶ್ವ ಅಲ್ಝೈಮರ್ ದಿನಾಚರಣೆ*
- *ಸೆ.25 ರಂದು ‘ಅಮರ್ ಜವಾನ್’ ಸ್ಮಾರಕದಲ್ಲಿ ಹುತಾತ್ಮ ದಿನಾಚರಣೆ*
- *ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ*
- *ಇ.ಎಂ.ಇ ಗೆ ಕೊಡಗಿನಿಂದ ಕೊಡುಗೆ*
- *ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಮೂರ್ನಾಡು-ವಿರಾಜಪೇಟೆ : ಸೆ.24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*