ಮಡಿಕೇರಿ ಆ.22 NEWS DESK : ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದ ಡಿ.ದೇವರಾಜ ಅರಸು ಅವರು ವಿನೂತನ ಹಾಗೂ ವಿಶಿಷ್ಟ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಪರಿವರ್ತನೆಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರು ನಾಮಕರಣ ಮಾಡಿದರು. ಬಡವರ ಹಾಗೂ ದುರ್ಬಲರ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದರು ಎಂದು ಆರ್.ಐಶ್ವರ್ಯ ತಿಳಿಸಿದರು. ವಿದ್ಯಾರ್ಥಿ ನಿಲಯಗಳ ಆರಂಭ, ಭಾಗ್ಯ ಜ್ಯೋತಿ, ಹಿಂದುಳಿದ ವರ್ಗಗಳಿಗೆ ಭೂಮಿ ಹಂಚಿಕೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆಗೆ ಶ್ರಮಿಸಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಸಮಾಜದಲ್ಲಿ ಕಟ್ಟಕಡೆಯವರು ಸಹ ಮುಖ್ಯವಾಹಿನಿಗೆ ಬರಬೇಕು ಎಂದು ಡಿ.ದೇವರಾಜ ಅರಸು ಅವರ ಆಶಯವಾಗಿತ್ತು. ಆ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದ್ದರು ಎಂದು ಆರ್.ಐಶ್ವರ್ಯ ಅವರು ನುಡಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಆರ್.ಭಾರತಿ ಅವರು ಮಾತನಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ. ಹಿಂದುಳಿದ ವರ್ಗಗಳ ಹರಿಕಾರರಾಗಿ ರಾಜ್ಯದಲ್ಲಿ ಪರಿವರ್ತನೆಯತ್ತ ಹೆಜ್ಜೆ ಹಾಕಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು ಎಂದು ಅವರು ತಿಳಿಸಿದರು.
ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಡಿ.ದೇವರಾಜ ಅರಸು ಅವರ ಇಚ್ಛಾಶಕ್ತಿ ಹಾಗೂ ಬದ್ಧತೆಯಾಗಿತ್ತು, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೃಷಿಕರು, ಬಡವರು, ನಿರ್ಗತಿಕರು, ಇತರರು ಓಡಾಡುವಂತೆ ಮಾಡಿದರು. ಸಾಲ ಮನ್ನಾ ಯೋಜನೆ, ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿಷೇಧ, ವೃದ್ಧಾಪ್ಯ ವೇತನ ಯೋಜನೆ ಜಾರಿ ಹೀಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದರು ಎಂದು ತಿಳಿಸಿದರು. ಹಾವನೂರು ಆಯೋಗ ರಚಿಸುವ ಮೂಲಕ ಎಲ್ಲಾ ವರ್ಗಗಳಿಗೂ ಮೀಸಲಾತಿ ತಲುಪಿಸಲು ಪ್ರಯತ್ನಿಸಿದರು. ಸಹಕಾರ ಸಂಘಗಳ ಸ್ಥಾಪನೆ, ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಆರಂಭ, ಬೆಂಗಳೂರಿಗೆ ಕಾವೇರಿ ನೀರು ಒದಗಿಸಿದ್ದು, ಕನ್ನಡ ನಾಡು ನುಡಿ ಬಗ್ಗೆ ಅಪಾರ ಅಭಿಮಾನವನ್ನು ಡಿ.ದೇವರಾಜ ಅರಸು ಅವರು ಹೊಂದಿದ್ದರು ಎಂದು ಭಾರತಿ ಅವರು ವಿವರಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ ಡಿ.ದೇವರಾಜ ಅರಸು ಅವರು ಮೌನಕ್ರಾಂತಿಯ ಹರಿಕಾರ ಎಂದರೆ ತಪ್ಪಾಗಲಾರದು ಎಂದು ನುಡಿದರು. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಡವರ್ಗದವರಿಗೆ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಅವರ ದೂರದೃಷ್ಟಿ ಹಾಗೂ ದಾರ್ಶನಿಕತ್ವದಿಂದ ಇಂದು ಹಲವರು ಇತರರಂತೆ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು ಟಿ.ಪಿ.ರಮೇಶ್ ಅವರು ನುಡಿದರು. ಸಣ್ಣ ಸಣ್ಣ ಸಮಾಜದ ಜನರನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದರು. ಅಪಾರ ದಾರ್ಶನಿಕ ಹಾಗೂ ಸಮಾಜ ಮುಖಿ ವ್ಯಕ್ತಿತ್ವವನ್ನು ಹೊಂದಿದ್ದ ಅರಸು ಅವರು ಅವಕಾಶ ವಂಚಿತರ ಕಣ್ಮಣಿ ಎಂದು ಬಣ್ಣಿಸಿದರು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಚಿತ್ರಕಲೆ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಉತ್ತಮ ನೌಕರರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಹೊನ್ನೇಗೌಡ ಅವರು ಮಾತನಾಡಿದರು. ಪ್ರಮುಖರಾದ ಮೇದಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತರಾದ ವಿಜಯ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಮಹಾದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಶಿವಶಂಕರ ಇತರರು ಇದ್ದರು. ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ಅವರು ಸ್ವಾಗತಿಸಿ, ನಿರೂಪಿಸಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕಾಶ್ ವಂದಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*