ಮಡಿಕೇರಿ NEWS DESK ಆ.25 : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆಯನ್ನು ಶನಿವಾರಸಂತೆಯ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ದಿ.ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಿದರು. ನಂತರ ಮಾತನಾಡಿದ ಹೋರಾಟ ಚಾಲನಾ ಸಮಿತಿಯ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ವಿದ್ಯಾರ್ಥಿಗಳಿಗೆ ದೇವರಾಜ ಅರಸು ಅವರ ಹುಟ್ಟು, ಶಿಕ್ಷಣ, ರಾಜಕೀಯ ಜೀವನ ಹಾಗೂ ಮುಖ್ಯಮಂತ್ರಿಗಳಾಗಿದ್ದಾಗ ಈ ರಾಜ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಆನಂದ್ ಮಾತನಾಡಿ ದೇವರಾಜ ಅರಸು ಅವರ 20 ಅಂಶಗಳ ಕಾರ್ಯಕ್ರಮ ಹಾಗೂ ಜನಪರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶಿವಾನಂದ ಮಾತನಾಡಿ, ವಿದ್ಯಾರ್ಥಿಗಳು ದೇವರಾಜ ಅರಸು ಅವರ ಸಾಧನೆ ಮತ್ತು ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ದುಂಡಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷರು, ಅಲ್ಪಸಂಖ್ಯಾತ ಘಟಕದ ಮುಖಂಡರು ಮತ್ತು ಅನುಷ್ಠಾನ ಸಮಿತಿ ಸದಸ್ಯರಾದ ಸಿ.ಬಿ.ಅಬ್ಬಾಸ್ ಮಾತನಾಡಿ, ದೇವರಾಜ್ ಅರಸು ಹಾಗೂ ಡಾ.ಅಂಬೇಡ್ಕರ್ ಅವರ ಚಿಂತನೆಗಳು, ರಾಜಕೀಯ ಬದುಕು ಹಾಗೂ ವಿದ್ಯಾರ್ಥಿಗಳಲ್ಲಿ ಇರಬೇಕಾದ ಸಾಮಾನ್ಯ ಜ್ಞಾನದ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಎಲ್.ಜನಾರ್ಧನ, ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಮುಖಂಡರುಗಳಾದ ಎಡೆಹಳ್ಳಿ ಚಿನ್ನಪ್ಪ, ಎಂ.ಕೆ.ಮಂಜುನಾಥ, ಮಾದ್ರೆ, ಮಂಜು, ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕ ಅನಂತ್ ಕುಮಾರ್ ಹಾಗೂ ರವಿ ಉಪಸ್ಥಿತರಿದ್ದರು. ಜಿಲ್ಲಾ ಚಾಲನಾ ಸಮಿತಿಯ ಕಾರ್ಯದರ್ಶಿ ಎಂ.ಎಸ್.ವೀರೇಂದ್ರ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*