ಮಡಿಕೇರಿ ಆ.23 NEWS DESK : ಅತ್ಯಂತ ವಿಶಿಷ್ಟ ಸಂಸ್ಕೃತಿ, ಪರಂಪರೆಗಳನ್ನು ಹೊಂದಿರುವ ಕೊಡಗಿನಲ್ಲಿ ಜನಪದ ಎನ್ನುವುದು ಜ್ಞಾನಪದವಾಗಿದ್ದು, ಇಲ್ಲಿನ ಬದುಕಿನ ಒಂದೊಂದು ಹಂತವನ್ನು ಜನಪದದಲ್ಲಿ ಮಿಳಿತ ಗೊಳಿಸಲಾಗಿದೆಯೆಂದು ಸಂತ ಅನ್ನಮ್ಮ ಪದವಿ ಕಾಲೇಜಿನ ಅರ್ಥ ಶಾಸ್ತ್ರ ಉಪನ್ಯಾಸಕರಾದ ಬಿ.ಎನ್. ಶಾಂತಿಭೂಷಣ್ ಅನಿಸಿಕೆ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಾಲೆಯಲ್ಲಿ ಆಯೋಜಿತ ದಿ.ಡಿ.ಜೆ ಪದ್ಮನಾಭ ಮತ್ತು ಬಿ.ಆರ್. ಸಾಯಿನಾಥ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಹಲವು ಬಗೆಗಳ ಜಾನಪದ ಕಲೆಗಳಿವೆ. ಕರ್ನಾಟಕ ರಾಜ್ಯದ ಜಾನಪದ ಶೈಲಿಗೆ ಹೋಲಿಸಿದರೆ ಅದು ವಿಭಿನ್ನ ಮತ್ತು ವೈಶಿಷ್ಟ ಪೂರ್ಣವಾಗಿದೆ ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ, ಕೊಡಗಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿ ಅದರ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿದವರು ದಿವಂಗತ ಡಿ.ಜೆ ಪದ್ಮನಾಭ ಅವರು ಅಂದು ನೆಟ್ಟ ಗಿಡ ಇಂದು ಹೆಮ್ಮರವಾಗಿ ಬೆಳೆದು ನಾಲ್ಕು ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿ ಪ್ರತಿ ವರ್ಷವೂ ನೂರಾರು ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ನುಡಿದರು. ದೇವಣಗೇರಿ ಬಿ.ಸಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಡಿ.ಲೋಕೇಶ್ ಮಾತನಾಡಿ, ಎಷ್ಟು ಕಾವ್ಯಗಳನ್ನು ಬರೆದರೆ ಕವಿಯಾಗಬಹುದು ಎನ್ನುವ ಸಾಹಿತ್ಯಾಸಕ್ತರ ಪ್ರಶ್ನೆಗೆ ದ.ರಾ.ಬೇಂದ್ರೆ ಅವರು ಉತ್ತರಿಸುತ್ತಾ ಕೇವಲ ಒಂದು ಕವನ ಬರೆದರೂ, ಸಾವಿರ ಕವನ ಬರೆದರು ಆತ ಕವಿಯೇ ಆದರೆ ಆ ಕವನ ಸಾವು ಇರದ (ಸಾವಿರದ) ಕವನವಾಗಿರಬೇಕು ಎಂದು ಹೇಳಿದ್ದನ್ನು ಜ್ಞಾಪಿಸಿಕೊಂಡರು. ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕು ಗೌರವ ಕಾರ್ಯದರ್ಶಿ ಟಾಮಿ ತೋಮಸ್ ಮಾತನಾಡಿದರು. ಅಮತ್ತಿ ಹೋಬಳಿ ಕಸಾಪ ಅಧ್ಯಕ್ಷ ಟಿ.ಹೆಚ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಬೆಟ್ಟದ ಸರಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಅಶ್ರಫ್, ವಿರಾಜಪೇಟೆ ತಾಲೂಕು ಗೌರವ ಕಾರ್ಯದರ್ಶಿ ಹೆಚ್.ಜಿ ಸಾವಿತ್ರಿ, ಜಿಲ್ಲಾ ನಿರ್ದೇಶಕ ವಿ.ಟಿ ಮಂಜುನಾಥ್, ದಿ. ಸೀತಾಬಾಯಿ ರಾಮಚಂದ್ರ ಕಾಮತ್ ದತ್ತಿನಿಧಿಯ ದಾನಿಗಳಾದ ಆರ್.ರಾಜರಾವ್, ಕಲಾವಿದರಾದ ಬಾವಾ ಮಾಲ್ದಾರೆ, ಸಾಹಿತ್ಯ ಪರಿಷತ್ತಿನ ಸದಸ್ಯರಾದ ಎಫ್.ಎಲ್.ಫ್ಯಾಟ್ರಿಕ್, ಯುವರಾಜ್ ಹಾಜರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಅಶ್ರಫ್ ಸ್ವಾಗತಿಸಿದರು. ಆಧ್ಯಾಪಕರುಗಳಾದ ನಯನ ಕುಮಾರಿ, ಮಮತಾ ಕಾಮತ್ ಮತ್ತು ಎಸ್.ಟಿ.ಆರತಿ ನಿರೂಪಿಸಿದರು. ತಾಲೂಕು ಗೌರವ ಕಾರ್ಯದರ್ಶಿ ಹೆಚ್.ಜಿ.ಸಾವಿತ್ರಿ ವಂದಿಸಿದರು. ಶಾಲೆಯ ವಿದ್ಯಾರ್ಥಿಗಳು ಕಂಸಾಳೆ ನೃತ್ಯ, ನಾಡಿನ ನುಡಿಯ ಕುರಿತು ನೃತ್ಯ ಮತ್ತು ಹಾಡುಗಳನ್ನು ಪ್ರಸ್ತುತಪಡಿಸಿದ್ದರು. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕಿರಣ್ ಹೆಚ್.ಆರ್ ಪ್ರಥಮ ಬಹುಮಾನ ಪಡೆದರೆ, ದಿಲೀಪ್ ದ್ವಿತೀಯ ಬಹುಮಾನ ಪಡೆದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*