
ಮಡಿಕೇರಿ ಆ.24 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಭಾರತ ಸರ್ಕಾರದ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ, ಹೈದ್ರಾಬಾದ್ ಮತ್ತು ಮೀನುಗಾರಿಕಾ ಇಲಾಖೆ, ಕರ್ನಾಟಕ ಸರ್ಕಾರದ ಸಹಭಾಗಿತ್ವದಲ್ಲಿ ಬ್ಲೂ ರೆವಲೂಷನ್ ಫಾರ್ ಸಸ್ಟೈನೇಬಲ್ ಫಿಶರಿಸ್ ಡೆವಲಪ್‍ಮೆಂಟ್ ವಿಷಯದ ಮೇಲೆ ಸೆಪ್ಟೆಂಬರ್, 25 ರಿಂದ 27 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ಅಕಾಡೆಮಿ ಕಚೇರಿಯಲ್ಲಿ ನಡೆಯಲಿದೆ.
ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನುರಿತ ವಿಜ್ಞಾನಿಗಳಿಂದ ತಾಂತ್ರಿಕ ಉಪನ್ಯಾಸಗಳು ನಡೆಯಲಿದ್ದು, ಮೀನುಗಾರಿಕಾ ಉದ್ಯಮಗಳಿಂದ ಪ್ರದರ್ಶನ ಮಳಿಗೆಯನ್ನು ಸಹ ಏರ್ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ್ ಪೇಪರ್ ಪ್ರೆಸೆಂಟೇಷನ್ ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‍ಗಳಿಗೆ ನಗದು ಬಹುಮಾನ ನೀಡಲಾಗುವುದು.
ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಮೀನುಗಾರಿಕಾ ಉದ್ಯಮಿಗಳು ಭಾಗವಹಿಸಬಹುದು. ಆಸಕ್ತ ಪ್ರತಿನಿಧಿಗಳು ಸೆಪ್ಟೆಂಬರ್, 10 ರೊಳಗೆ (Google form-https://forms.gle/jAsg6kGf6W34Lpa8) ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ಅಧಿಕಾರಿಯನ್ನು(9620767819) ಮತ್ತು ದೂ. 080-29721550) ನ್ನು ಸಂಪರ್ಕಿಸಬಹುದು. ಅಥವಾ ಅಕಾಡೆಮಿಯ ವೆಬ್‍ಸೈಟ್ www.kstacademy.in ನ್ನು ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.









