ನಾಪೋಕ್ಲು ಆ.24 NEWS DESK : ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ತಮ್ಮ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿ ಎಂದು ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಅವರು ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ..ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯ ವೃದ್ಧಿಸುವುದಲ್ಲದೇ ಶೈಕ್ಷಣಿಕವಾಗಿಯೂ ಮುಂದುವರಿಯಲು ಸಾಧ್ಯ ಎಂದರು. ಈಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲೂ ಕ್ರೀಡೆಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಬಿದ್ದಂಡ ಎಂ.ರಾಜೇಶ್ ಅಚ್ಚಯ್ಯ, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ವ್ಯವಸ್ಥಾಪಕರು, ಶಿಕ್ಷಕರು, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು. ಕ್ರೀಡಾಕೂಟದ ಉಸ್ತುವಾರಿಯನ್ನುನರಿಯಂದಡ ಕೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ.ಎಸ್.ಭವ್ಯ, ದೈಹಿಕ ಶಿಕ್ಷಣ ಶಿಕ್ಷಕ ಪಿ.ಬಿ.ಪೊನ್ನಪ್ಪ ಮತ್ತು ಶಿಕ್ಷಕರು ವಹಿಸಿದ್ದರು. ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.









