
ನಾಪೋಕ್ಲು ಆ.24 NEWS DESK : ನೆಲಜಿ ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಆ.26 ರಂದು ಉತ್ಸವ ನಡೆಯಲಿದೆ. ಉತ್ಸವದ ಅಂಗವಾಗಿ ತುಲಾಭಾರ ಸೇವೆ, ಎತ್ತೊಪೋರಾಟ, ಮಹಾಪೂಜೆ, ದೇವರ ನೃತ್ಯಬಲಿ, ಅನ್ನಸಂತರ್ಪಣೆ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿದೆ. ತುಲಾಭಾರ ಸೇವೆ ಮಾಡುವ ಭಕ್ತರು ಮುಂಚಿತವಾಗಿ ದೇವಸ್ಥಾನದ ತಕ್ಕ ಮುಖ್ಯಸ್ಥರನ್ನು ಸಂಪರ್ಕಿಸಬಹುದಾಗಿದೆ ಎಂದು ದೇವಸ್ಥಾನದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು ಮುಂಡಂಡ ಎಂ.ನಾಣಯ್ಯ-9341421666, ಕಾರ್ಯದರ್ಶಿ ಮುಕ್ಕಾಟಿರ ಎಂ.ವಿನಯ್-9449554997 ಸಂಪರ್ಕಿಸಬಹುದಾಗಿದೆ.
ವರದಿ : ದುಗ್ಗಳ ಸದಾನಂದ.









