Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಕಸ ವಿಲೇವಾರಿ ಸಮಸ್ಯೆ ಬಗೆಹರಿಸಲು ಆಗ್ರಹ*

ಆಗಷ್ಟ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.24 NEWS DESK : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ರಾಶಿ ರಾಶಿ ತ್ಯಾಜ್ಯವನ್ನು ಕಳೆದ ಅನೇಕ ವರ್ಷಗಳಿಂದ ಜ್ಯೋತಿ ನಗರದ ಸ್ಟೋನ್ ಹಿಲ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಸುರಿಯಲಾಗುತ್ತಿದೆ. ಇದು ಮುಂದೊಂದು ದಿನ ನಗರಕ್ಕೆ ಅಪಾಯವನ್ನು ತಂದೊಡ್ಡಲ್ಲಿದ್ದು, ನಗರಸಭೆ ತಕ್ಷಣ ಎಚ್ಚೆತ್ತುಕೊಂಡು ಜನವಸತಿಯಿಲ್ಲದ ಪ್ರದೇಶದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ನಗರದ ಸಾಮಾಜಿಕ ಚಿಂತಕ ಹೆಚ್.ಎಂ.ಕೃಷ್ಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪುರಸಭೆಯಾಗಿದ್ದ ಮಡಿಕೇರಿ, ನಗರಸಭೆಯಾಗಿ ಮೇಲ್ದರ್ಜೆಗೇರಿದರೂ ಇಲ್ಲಿಯವರೆಗೆ ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ನಗರದಲ್ಲಿ ಸಂಗ್ರಹವಾಗುವ ಟನ್ ಗಟ್ಟಲೆ ಕಸವನ್ನು ಕುಡಿಯುವ ನೀರಿನ ಟ್ಯಾಂಕ್ ಇರುವ ಸ್ಟೋಲ್ ಹಿಲ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಇದು ಸುತ್ತಲಿನ ಪರಿಸರವನ್ನು ಕಲುಷಿಗೊಳಿಸಿದೆಯಲ್ಲದೆ, ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ ಎಂದರು. ಕಸದ ರಾಶಿಯ ಪರಿಣಾಮ ಮುಂದೊಂದು ದಿನ ಈ ಬೆಟ್ಟ ಪ್ರದೇಶ ಕುಸಿಯಲೂಬಹುದು. ಅನಾಹುತ ಎದುರಾಗುವ ಮೊದಲು ನಗರಸಭೆ ಗಾಳಿಬೀಡಿನ 2ನೇ ಮೊಣ್ಣಂಗೇರಿಯಲ್ಲಿ ಗುರುತಿಸಿರುವ ಜಾಗದ ತಾಂತ್ರಿಕ ಅಡಚಣೆಗಳನ್ನು ಸರಿಪಡಿಸಿ ವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಖುದ್ದು ಆಸಕ್ತಿ ವಹಿಸಿ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿಕೊಂಡಿರುವುದಾಗಿ ತಿಳಿಸಿದರು.
ನೀರಿನ ಟ್ಯಾಂಕ್ ಇರುವ ಸ್ಟೋಲ್ ಹಿಲ್ ಪ್ರದೇಶದಲ್ಲಿ ಕಸ ವಿಲೇವಾರಿ ಮಾಡುತ್ತಿರುವುದು ನಿಯಮಬಾಹಿರ ಕ್ರಮವಾಗಿದೆ. ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿ ಹೈಟೆಕ್ ವ್ಯವಸ್ಥೆಗೆ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಬೇಕು. ಜನಪ್ರತಿನಿಧಿಗಳು ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಹೆಚ್.ಎಂ.ಕೃಷ್ಣ ಒತ್ತಾಯಿಸಿದರು. ಇತ್ತೀಚೆಗೆ ಸಿದ್ದಾಪುರ ಗ್ರಾ.ಪಂ ಭಾಗದಲ್ಲೂ ಕಸ ವಿಲೇವಾರಿ ಸಮಸ್ಯೆ ಕಗ್ಗಂಟಾಗಿದ್ದು, ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳು ಕಸದ ರಾಶಿಯನ್ನು ಗ್ರಾ.ಪಂ ಎದುರು ಹಾಕಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ಗ್ರಾ.ಪಂ ತಕ್ಷಣ ಸರ್ಕಾರಿ ಜಾಗವನ್ನು ಗುರುತಿಸಿ ಅಥವಾ ಖಾಸಗಿ ಜಾಗವನ್ನು ಖರೀದಿ ಮಾಡಿ ಕಸ ವಿಲೇವಾರಿಗೆ ವೈಜ್ಞಾನಿಕ ರೂಪ ನೀಡಬೇಕು ಎಂದು ಮನವಿ ಮಾಡಿದರು.
ಪಕ್ಕದ ಕೇರಳ ರಾಜ್ಯದ ವಯನಾಡಿನಲ್ಲಿ ನಡೆದ ಜಲಸ್ಫೋಟ ಮತ್ತು ಭೂಕುಸಿತದ ಮಾದರಿಯ ಅನಾಹುತಗಳು ಕೊಡಗು ಜಿಲ್ಲೆಯಲ್ಲೂ ಸಂಭವಿಸುವ ಅಪಾಯವಿದೆ ಎಂದು ಅಭಿಪ್ರಾಯಪಟ್ಟ ಕೃಷ್ಣ ಅವರು, ಯಾವುದೇ ಕಾರಣಕ್ಕೂ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಬೃಹತ್ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಬಾರದು ಮತ್ತು ಪ್ರಕೃತಿಗೆ ವಿರುದ್ಧವಾದ ಯೋಜನೆಗಳನ್ನು ರೂಪಿಸಬಾರದು ಎಂದು ಒತ್ತಾಯಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.