ಗುಡ್ಡೆಹೊಸೂರು NEWS DESK ಆ.24 : ಲಾರಿ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾನ್ನಪ್ಪಿರುವ ಘಟನೆ ಗುಡ್ಡೆಹೊಸೂರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಲಾರಿಯಲ್ಲಿದ್ದ ಸುಂಟಿಕೊಪ್ಪದ ಕಾರ್ಮಿಕ ರಾಜು ಎಂಬುವವರೇ ಮೃತ ದುರ್ದೈವಿ. ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬರ್ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಕುಶಾಲನಗರದ ಕಡೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿತು. ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










