ಮಡಿಕೇರಿ ಆ.26 NEWS DESK : ಇತರರಿಗೆ ಮಾದರಿಯಾಗಿರುವ “ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ” ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಶ್ರಮದಲ್ಲಿರುವ ನೊಂದ ಹಿರಿಯರಿಗೆ ಅನ್ನದಾನ ಹಾಗೂ ರಸಮಂದರಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಈ ಬಾರಿ ಮಡಿಕೇರಿಯ ತನಲ್, ವಿಕಾಸ್ ಮತ್ತು ಶಿವದೂತ ಆಶ್ರಮದಲ್ಲಿ ಬಳಗದ ಪ್ರಮುಖರು ಅನ್ನದಾನ ಮಾಡಿದರು. ಬಳಗದ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಅವರು ಮಾತನಾಡಿ ಸದಸ್ಯ ನಾಬಿನ್ ಕೆವಿನ್ ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆ ರಸಮಂಜರಿ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ ಎಂದರು. ಪ್ರತಿ ತಿಂಗಳ ಕೊನೆಯ ಭಾನುವಾರ ನೊಂದವರೊಂದಿಗೆ ಬೆರೆತು ಮನಸ್ಸಿಗೆ ಕೊಂಚ ನೆಮ್ಮದಿ ನೀಡುವ ಅಳಿಲು ಸೇವೆಯಲ್ಲಿ ಬಳಗ ತೊಡಗಿಸಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು. ಬಳಗದ ಅಧ್ಯಕ್ಷ ಮಹಮ್ಮದ್ ಆಲಿ, ಉಪಾಧ್ಯಕ್ಷ ಸುಲೈಮಾನ್, ಖಜಾಂಚಿ ಶಿವಣ್ಣ, ಸದಸ್ಯ ಗಿಲ್ಬರ್ಟ್ ಮತ್ತಿತರರು ಉಪಸ್ಥಿತರಿದ್ದರು. ನಾಬಿನ್ ಕೆವಿನ್ ಅವರ ನಿಧನಕ್ಕೆ ಬಳಗದ ಪ್ರಮುಖರು ಹಾಗೂ ಆಶ್ರಮವಾಸಿಗಳು ಇದೇ ಸಂದರ್ಭ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಿದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*