ಮಡಿಕೇರಿ ಆ.26 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಸಾಹಿತಿ ಹಂಚೇಟಿರ ಫ್ಯಾನ್ಸಿ ಮುತ್ತಣ್ಣ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಮ್ಮ ಮಾವ ಮತ್ತು ಅತ್ತೆಯವರಾದ ದಿ. ಹಂಚೇಟಿರ ಕುಟ್ಟಪ್ಪ ಮತ್ತು ಕಾಮವ್ವ ದಂಪತಿಗಳ ಜ್ಞಾಪಕಾರ್ಥ ರೂ 50,000 ಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. ದತ್ತಿಯ ಆಶಯವು ಕೊಡಗಿನ ಜಾನಪದ ಪ್ರಕಾರಗಳ ಹಿನ್ನೆಲೆ, ಹಾಡು, ಕುಣಿತ ಗಳ ಕುರಿತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸುವುದು. ಕೊಡಗಿನ ಒಂದು ಪದವಿ ಕಾಲೇಜಿನಿಂದ ಒರ್ವ ವಿದ್ಯಾರ್ಥಿಗೆ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ, ಕೊಡಗಿನ ಜಾನಪದ ಕುರಿತು ಉಪನ್ಯಾಸ ಏರ್ಪಡಿಸುವುದು ಆಗಿದೆ. ದತ್ತಿಯ ಮೊತ್ತದ ಚೆಕ್ ಅನ್ನು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮೂರ್ನಾಡು ಹೋಬಳಿ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಸದಸ್ಯ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರದ ಸಮ್ಮುಖದಲ್ಲಿ ಸ್ವೀಕರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*