ಸೋಮವಾರಪೇಟೆ ಆ.26 NEWS DESK : ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರಳೀಧರ್ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಆಯ್ಕೆಯಾಗಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕರ್ನಾಟಕ ವಿದ್ಯಾಭಾರತಿ ಸಂಸ್ಥೆಯು ಬೆಂಗಳೂರಿನ ಜೈಗೋಪಾಲ್ ಗರೋಡಿಯ ರಾಷ್ಟೋತ್ಥಾನ ವಿದ್ಯಾಕೇಂದ್ರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಫೈನಲ್‍ನಲ್ಲಿ ಬೆಂಗಳೂರು ಜಿಲ್ಲಾ ತಂಡವನ್ನು ಪರಾಭವಗೊಳಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕೊಡಗಿನ ಸೋಮವಾರಪೇಟೆಯ ವಿದ್ಯಾರ್ಥಿ ತರುಣ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಸೆ.27 ರಂದು ದೆಹಲಿಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಮಂಗಳೂರಿನ ಶಕ್ತಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ತರುಣ್ ಮುರಳೀಧರ್, ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್, ಯಶಸ್ವಿನ್ ಗೌಡ, ಅಕ್ಷಯ್ ನಾಯಕ್, ಧನ್ವಿತ್ ರೈ ಅವರನ್ನೊಳಗೊಂಡ ತಂಡದಲ್ಲಿ ಪಾಲ್ಗೊಂಡಿದ್ದರು. ಶಕ್ತಿ ಕಾಲೇಜಿನ ಕೋಚ್ ಮನೋಜ್ ಹಾಗೂ ವಿವೇಕಾನಂದ ಕಾಲೇಜಿನ ಕೋಚ್ ಡಾ. ಜ್ಯೋತಿ ಅವರು ಕ್ರೀಡಾಪಟುಗಳಿಗೆ ತರಬೇತಿ ನೀಡಿದರು. ಸೋಮವಾರಪೇಟೆಯ ಪತ್ರಕರ್ತ ಮುರಳೀಧರ್- ಸರಿತ ದಂಪತಿಗಳ ಪುತ್ರನಾಗಿರುವ ತರುಣ್ ಅವರಿಗೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರ ಹಾಗೂ ನಾವು ಪ್ರತಿಷ್ಠಾನ ಸಂಸ್ಥಾಪಕ ಗೌತಮ್ ಕಿರಗಂದೂರು ಅವರು ಶಾಲಾ ಹಂತದಲ್ಲಿ ತರಬೇತಿ ನೀಡಿದ್ದರು.
Breaking News
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*
- *ಯತಿಕಾರ್ಪ್ ಇಂಡಿಯಾ ಐಟಿ ಕಂಪನಿಯಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ : ಉತ್ತಮ ವೇತನ*
- *ಜ.25 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗಿಗೆ ಭೇಟಿ