ಮಡಿಕೇರಿ ಆ.26 NEWS DESK : ಜೀವನದಲ್ಲಿ ನಿಂತ ನೀರಾಗದೆ ಹರಿವ ನೀರಿನಂತೆ ಬದುಕನ್ನು ಮುನ್ನಡೆಸಬೇಕು. ಉತ್ತಮ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಮಹಾಭಾರತದಲ್ಲಿ ಶ್ರೀಕೃಷ್ಣನ ಸಂದೇಶಗಳು ಧನಾತ್ಮಕ ಚಿಂತನೆಯನ್ನು ಒಳಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ವರ್ಣಿಸಿದರು. ಮಹಾಭಾರತದಲ್ಲಿ ಶ್ರೀಕೃಷ್ಣನ ಬಗ್ಗೆ ಒಳ್ಳೆಯ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದರು. ಶ್ರೀ ಕೃಷ್ಣ ಒಂದು ರೀತಿ ವಿಶಿಷ್ಟ ಚೇತನರಾಗಿದ್ದಾರೆ. ಅರಾಜಕತೆ, ಅಧರ್ಮ ಸಹಿಸುತ್ತಿರಲಿಲ್ಲ ಎಂದು ಅವರು ಹೇಳಿದರು. ಭರತಖಂಡದಲ್ಲಿ ಇಡೀ ವೇದಾಂತವನ್ನು ಸುಲಲಿತವಾಗಿ ತಲುಪಿಸಿದವರು ಶ್ರೀಕೃಷ್ಣ ಎಂದರೆ ತಪ್ಪಾಗಲಾರದು. ತತ್ವಶಾಸ್ತ್ರ ಸೇರಿದಂತೆ ಹಲವು ಜ್ಞಾನವನ್ನು ಹೊಂದಿದ್ದ ಶ್ರೀಕೃಷ್ಣರು ಇಡೀ ಭರತ ಖಂಡದಲ್ಲಿ ತಮ್ಮದೇ ಆದ ಇತಿಹಾಸ ಹೊಂದಿದ್ದಾರೆ ಎಂದರು. ಕವಿಗಳು, ಸಾಹಿತಿಗಳು ಶ್ರೀಕೃಷ್ಣನನ್ನು ವಿವಿಧ ರೀತಿಯಲ್ಲಿ ವರ್ಣಿಸಿದ್ದಾರೆ. ದಾಸ ಪರಂಪರೆ ಸೃಷ್ಟಿಯಾಗಿದ್ದೇ ಶ್ರೀಕೃಷ್ಣರಿಂದ ಎಂದರೆ ತಪ್ಪಾಗಲಾರದು ಎಂದು ಹೇಳಿದರು. ಪ್ರತಿಯೊಬ್ಬರೂ ಭಗವದ್ಗೀತೆಯನ್ನು ಅಧ್ಯಯನ ಮಾಡಿದ್ದಲ್ಲಿ ಶ್ರೀಕೃಷ್ಣನ ಮಹತ್ವ ಬಗ್ಗೆ ಅರಿವಾಗುತ್ತದೆ. ಶ್ರೀಕೃಷ್ಣನ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಪತ್ರಕರ್ತ ಚಿ.ನಾ.ಸೋಮೇಶ್ ಮಾತನಾಡಿ ಶ್ರೀಕೃಷ್ಣ ಜಾತ್ಯಾತೀತ, ಮೇರು ವ್ಯಕ್ತಿತ್ವ ಹೊಂದಿದ್ದರು. ಶ್ರೀಕೃಷ್ಣನ ಇತಿಹಾಸದ ಬಾಲ್ಯವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ದೇಶ ವಿದೇಶಗಳಲ್ಲಿ ಶ್ರೀಕೃಷ್ಣನ ಅಧ್ಯಯನ ಮಾಡಿದ್ದಾರೆ. ಶ್ರೀಕೃಷ್ಣ ಜಗತ್ಪ್ರಸಿದ್ದ ಮೇರು ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಸೂಯೆ ನಾಶ ಆಗಬೇಕು ಎಂದು ಶ್ರೀಕೃಷ್ಣರು ಬದುಕಿನುದ್ದಕ್ಕೂ ಸಾರಿದ್ದಾರೆ. ಭಗವಾನ್ ಶ್ರೀಕೃಷ್ಣನನ್ನು ವ್ಯಕ್ತಿಯಾಗಿ ನೋಡಬೇಕಿದೆ. ಮಹಾಭಾರತದಲ್ಲಿ ಚತುರನಾಗಿ, ಮಹಾಜ್ಞಾನಿಯಾಗಿ ನೋಡುತ್ತೇವೆ ಎಂದರು. ಗೋಕುಲದಲ್ಲಿ ಆಟವಾಡಿಕೊಂಡು ಬೆಳೆದ ಶ್ರೀಕೃಷ್ಣರ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಶ್ರೀಕೃಷ್ಣನಿಂದ ತಾಳ್ಮೆ ಕಲಿಯುವಂತಾಗಬೇಕು ಎಂದರು. ಇಸ್ಕಾನ್ ಸಂಸ್ಥೆಯ ಸುದೀರ್ಪ್ರಭು ಮಾತನಾಡಿ 525 ವರ್ಷಗಳ ಹಿಂದೆ ಜನ್ಮ ತಾಳಿದ ಶ್ರೀಕೃಷ್ಣನ ಆದರ್ಶ ಗುಣಗಳು ಸಾರ್ವಕಾಲೀಕವಾಗಿವೆ ಎಂದರು. ಕೃಷ್ಣನ ವ್ಯಕ್ತಿತ್ವದಲ್ಲಿ ಭಗವಾನ್ ಕೃಷ್ಣನನ್ನು ನೋಡಬಹುದಾಗಿದೆ. ಸದಾ ಬಡವರಿಗಾಗಿ ಚಿಂತನೆ ಮಾಡುತ್ತಿದ್ದ ಶ್ರೀಕೃಷ್ಣನ ಜೀವನ ಚರಿತ್ರೆ ತಿಳಿದುಕೊಳ್ಳುವಂತಾಗಬೇಕು ಎಂದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೋರನ ಸರಸ್ವತಿ ಮಾತನಾಡಿ, ಶ್ರೀಕೃಷ್ಣನ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಶ್ರೀಕೃಷ್ಣರು ಭಕ್ತಿಯ ಶಕ್ತಿಯಾಗಿ ಬರುತ್ತಾರೆ ಎಂದು ತಿಳಿಸಿದರು. ಕಂಚಿ ಕಾಮಾಕ್ಷಿ ದೇವಾಲಯದ ಗೌರವ ಅಧ್ಯಕ್ಷ ಹಾಗೂ ಗೌಳಿ ಸಮುದಾಯ ಮುಖಂಡ ಜಿ.ವಿ.ರವಿಕುಮಾರ್ ಮಾತನಾಡಿ, ಜೀವನದಲ್ಲಿ ಮಾನವೀಯ ಮೌಲ್ಯ ಮತ್ತು ಆದ್ಯಾತ್ಮಿಕತೆಯನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಣುತೆ ಇರಬಾರದು. ಒಳ್ಳೆಯದನ್ನು ರೂಡಿಸಿಕೊಳ್ಳಬೇಕು ಎಂದರು.
ಇಸ್ಕಾನ್ ಸಂಸ್ಥೆಯ ಚೈತನ್ಯದಾಸ್ ಪ್ರಭು, ಬಸವರಾಜ ಪ್ರಭು, ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಅಧ್ಯಕ್ಷರಾದ ಪವನ್ ಜಿ.ಬಿ., ಗೌರವಾಧ್ಯಕ್ಷರಾದ ಜಿ.ಜಿ.ಬಾಲಕೃಷ್ಣ ಇತರರು ಇದ್ದರು. ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿ, ಶ್ರೀಕೃಷ್ಣನ ಕುರಿತು ಹಾಡು ಹಾಡಿ ಗಮನ ಸೆಳೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*