ಮಡಿಕೇರಿ NEWS DESK ಆ.26 : ಕೊಡಗು ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಆರಂಭಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದು ಪಾಸ್ ಪೋರ್ಟ್ ಸೇವಾ ಕೇಂದ್ರದ ಅಗತ್ಯತೆಯ ಬಗ್ಗೆ ವಿವರಿಸಿದ್ದಾರೆ. ಸೇವಾ ಕೇಂದ್ರವನ್ನು ಶೀಘ್ರ ಮಂಜೂರು ಮಾಡಬೇಕೆಂದು ಕೋರಿಕೊಂಡಿದ್ದಾರೆ.