ಬೆಳಗಾವಿ NEWS DESK ಆ.26 : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. *ಕೈ ಮೇಲಾಗ್ಲಿ-ದೇಶ ಆಳು ದೊರೆಯೇ* ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು. ಅಕ್ಕಾತಾಯಿ ಜೊತೆ ಬಂದಿದ್ದ ಮುತ್ತೈದೆಯರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು. *ನಿಮ್ಮ ಆಶೀರ್ವಾದ ಹೀಗೇ ಇರಲಿ* ಅಕ್ಕಾತಾಯಿ ಮತ್ತು ಮುತ್ತೈದೆಯರ ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ಮುತ್ತೈದೆಯರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.
Breaking News
- *ಕನ್ನಡ ಸಾಹಿತ್ಯ ಭವನ ನಿರ್ಮಾಣ : ಅಗತ್ಯ ಸಹಕಾರಕ್ಕೆ ಕೊಡಗು ಜಿಲ್ಲಾ ಕ.ಸಾ.ಪ ಮನವಿ*
- *ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ‘ಅರೆ ವಿಶೇಷ ಕೊಠಡಿ’ ಉದ್ಘಾಟನೆ : ಎಲ್ಲರಿಗೂ ಎಲ್ಲೆಡೆ ಆರೋಗ್ಯ ಸೌಲಭ್ಯ ದೊರೆಯಲಿ : ಶಾಸಕ ಡಾ.ಮಂತರ್ ಗೌಡ*
- *ಬೃಹತ್ ಭೂಪರಿವರ್ತನೆ, ಭೂವಿಲೇವಾರಿ, ಲೇಔಟ್, ಮೆಗಾ ಟೌನ್ಶಿಪ್ಗೆ ವಿರೋಧ : ಕಡಂಗದಲ್ಲಿ ಸಿಎನ್ಸಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
- *ಡಿ.8 ರಂದು ಮಡಿಕೇರಿಯಲ್ಲಿ ಸಂಸದರ ನೂತನ ಕಚೇರಿ ಆರಂಭ*
- *ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*
- *ಕರಿಕೆ ಬಿಜೆಪಿ ಶಕ್ತಿ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ*
- *ವೀರ ಸೇನಾನಿಗಳಿಗೆ ಅಗೌರವ : ಡಿ.6ರಂದು ಮಡಿಕೇರಿಯಲ್ಲಿ ಮಾಜಿ ಸೈನಿಕರಿಂದ ಪ್ರತಿಭಟನೆ*
- *‘ಸ್ವಾಭಿಮಾನಿ’ ಸಮಾವೇಶದಲ್ಲಿ ಕೊಡಗಿನಿಂದ 8 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ*
- *ಚೇಶೈರ್ ಹೋಮ್ ಶಾಲೆಯ ಮುಖ್ಯಶಿಕ್ಷಕ ಶಿವರಾಜ್ ಗೆ ಸನ್ಮಾನ*