ಮಡಿಕೇರಿ NEWS DESK ಆ.27 : ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 29-8-2024 ರಂದು ವಿಶ್ವ ಜಾನಪದ ದಿನಾಚಣೆ ಅಂಗವಾಗಿ ಜಾನಪದ ವೈವಿಧ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಜಾನಪದ ಪರಿಷತ್‌ನ ಕೊಡಗು ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ.ಕೆ.ವೆಂಕಟೇಶ್ ಪ್ರಸನ್ನ ಪಾಲ್ಗೊಳ್ಳಲಿದ್ದಾರೆ.ಅತಿಥಿಗಳಾಗಿ ಜಾನಪದ ಪರಿಷತ್ ಕೊಡಗು ಘಟಕದ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್,ಖಜಾಂಚಿ ಸಂಪತ್ ಕುಮಾರ್,ಕಾರ್ಯದರ್ಶಿ ಉಜ್ವಲ್ ರಂಜಿತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು,ಕೊಡಗು ವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಾವೇರಿ ಪ್ರಕಾಶ್,ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಎಚ್.ಟಿ.ಅನಿಲ್ ಭಾಗವಹಿಸಲಿದ್ದಾರೆ.ಶನಿವಾರ ಸಂತೆಯ ಕಲಾವಿದ ಮೊಗೆರ ಸುರೇಶ್,ಮಡಿಕೇರಿಯ ಸಪ್ತಸ್ವರ ಕಲಾವಿದರ ಬಳಗ,ಸ.ಪ್ರ.ದ.ಕಾಲೇಜಿನ ಕನ್ನಡಸಂಘದಿ0ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಚಿತ್ರಕಲಾವಿದ ಸಾದಿಕ್ ಹಂಸ ಮತ್ತು ಉಜ್ವಲ್ ರಂಜಿತ್ ತಂಡದಿ0ದ ಕುಂಚಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.










