ವಿರಾಜಪೇಟೆ NEWS DESK ಆ.27 : ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅವರು ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ನೈತಿಕ ಮೌಲ್ಯಗಳ ಜೊತೆಯಲ್ಲಿ ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಯೋಗ, ಜ್ಞಾನ, ಏಕಾಗ್ರತೆಯ ಮೂಲಕ ಜೀವನದ ಗುರಿ ಸಾಧಿಸಬೇಕು. ಸಮಾಜಮುಖಿಗಳಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಅವರು ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ.ದಮಯಂತಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ ಸಾಲ್ಡಾನ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪಮಿತ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಕ್ಷಿತಾ ಹಾಗೂ ತಂಡ ಪ್ರಾರ್ಥಿಸಿ, ಡೈನ ಸೋಮಯ್ಯ ಸ್ವಾಗತಿಸಿ, ಪಮಿತಾ ವಂದಿಸಿದರು. ಪ್ರಜ್ವ, ನಾಫಿಯಾ, ಶಂಮ್ಲ ನಿರೂಪಿಸಿ, ಹರ್ಷ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.










