ಸುಂಟಿಕೊಪ್ಪ NEWS DESK ಆ.27 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್ ಮುಂಭಾಗದಲ್ಲಿ ನಿಲ್ಲಿಸಿದ್ದ 3 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಮೂವರು ಗಾಯಗೊಂಡಿದ್ದು, ಬೈಕ್ ಗಳಿಗೆ ಹಾನಿಯಾಗಿದೆ. ಮೈಸೂರು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ವೈದ್ಯರೊಬ್ಬರಿಗೆ ಸೇರಿದ ಇನೋವ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.