ಸೋಮವಾರಪೇಟೆ ಆ.28 NEWS DESK : ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024-25ನೇ ಸಾಲಿನ ತಾಲ್ಲೂಕು ಮತ್ತು ವಲಯ ಮಟ್ಟದ ಕ್ರೀಡಾಕೂಟವು ಆ.29 ರಂದು ಚೌಡ್ಲು ಗ್ರಾಮದಲ್ಲಿ ನಡೆಯಲಿದೆ. ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಶಾಲಾ ಅಧ್ಯಕ್ಷ ಎಂ.ಟಿ.ದಾಮೋದರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಚೌಡ್ಲು ಗ್ರಾ.ಪಂ ಅಧ್ಯಕ್ಷೆ ಗೀತಾ ವಹಿಸಲಿದ್ದಾರೆ. ಉಪಾಧ್ಯಕ್ಷ ನತೀಶ್ ಮಂದಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಂಜೇಶ್, ತಾಲ್ಲೂಕು ದೈಹಿಕ ಶಿಕ್ಷಣ ಅಧೀಕ್ಷಕರಾದ ಸುಕುಮಾರಿ, ಶಾಲಾ ಕಾರ್ಯದರ್ಶಿ ಲಿಖಿತ್ ದಾಮೋದರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜು, ವಲಯ ಕ್ರೀಡಾ ಅಧ್ಯಕ್ಷೆ ಯಶೋಧ, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ರೇವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









