ನಾಪೋಕ್ಲು ಆ.28 NEWS DESK : ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಯುವಕ ಸಂಘದ ಆಶ್ರಯದಲ್ಲಿ ಕೈಲ್ ಮುಹೂರ್ತ (ಕೈಲ್ಪೊಳ್ದ್) ಹಬ್ಬದ ಪ್ರಯುಕ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾಕೂಟ ನಡೆಯಿತು. ಯೂತ್ ಕ್ಲಬ್ ಅಧ್ಯಕ್ಷ ಕಾಳೆಯಂಡ ರಿನೇಶ್ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಕ್ರೀಡಾಕೂಟವನ್ನು ನಿವೃತ್ತ ಎಸ್ಪಿ ಬೊಳ್ಯೆಪಂಡ ರವಿ ಮಾಚಯ್ಯ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಬೊಳ್ಯಪಂಡ ಜಾನ್ ಪೂಣಚ್ಚ ಪ್ರಥಮ, ಕಾಳಚಂಡ ಹರ್ಷ ಉತ್ತಯ್ಯ ದ್ವಿತೀಯ, ಬೇತು ಗ್ರಾಮದ ಕಾಫಿ ಬೆಳೆಗಾರ ಕುಟ್ಟಂಚೆಟ್ಟೀರ ಶ್ಯಾಂ ಬೋಪಣ್ಣ, ಕೊಂಡೀರ ಕಾಳಯ್ಯ, ಠಾಣಾಧಿಕಾರಿ ಮಂಜುನಾಥ್ ಸಂಘದ ಪದಾಧಿಕಾರಿಗಳು ಸದಸ್ಯರು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ಬಲ್ಲಮಾವಟಿ :: ಸಮೀಪದ ಬಲ್ಲಮಾವಟಿ ಗ್ರಾಮದ ಅಪೋಲೋ ಯುವಕ ಸಂಘ ಮತ್ತು ಕಾವೇರಿ ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಾಡಹಬ್ಬ ಕೈ ಮುಹೂರ್ತ ಪ್ರಯುಕ್ತ ಆಟೋಟ ಕೂಟ ಜರುಗಿತು. ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯ ಮುಕ್ಕಾಟಿರ ಕೆ.ಸುತನ್ ಸುಬ್ಬಯ್ಯ ಶಿಕ್ಷಕಿ ಮೂವೆರ ಕಾವೇರಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಹಾಕಿ ತೀರ್ಪುಗಾರರಾದ ಅಪ್ಪಚೆಟ್ಟೋಳಂಡ ಬಿ.ಹರ್ಷಿತ್ ಐಯ್ಯಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.









