ಮಡಿಕೇರಿ NEWS DESK ಆ.30 : ಕಾಡಾನೆ ದಾಳಿಗೆ ಸಿಲುಕಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚೆನ್ನಯ್ಯನಕೋಟೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಕಾತಯಿ(72) ಎಂಬುವವರೇ ಮೃತ ದುರ್ದೈವಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಗನ ಮನೆಯಿಂದ ಹೊರ ಬರುತ್ತಿದ್ದ ಕಾತಯಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿ ತುಳಿದಿದೆ ಎಂದು ತಿಳಿದು ಬಂದಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆಗಳು ಗ್ರಾಮದಲ್ಲಿ ಉಪಟಳ ನೀಡುತ್ತಿವೆ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿರಾಜಪೇಟೆಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು, ಹಿರಿಯ ಅರಣ್ಯ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.