ಸೋಮವಾರಪೇಟೆ ಆ.30 NEWS DESK : ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜಂಪ್ ಸ್ಮಾಷ್ ಒಳಾoಗಣ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಸೋಮವಾರಪೇಟೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿ ನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಫೈನಲ್ ಪಂದ್ಯದಲ್ಲಿ ಕುಶಾಲನಗರ ವಿವೇಕಾನಂದ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು. ತಂಡದಲ್ಲಿ ಪುಷ್ಪಾoಜಲಿ ಯಡೂರು, ಧನ್ಯ ಯಡೂರು, ಜೀವಿತಾ ಹಿರಿಕರ ತಂಡವನ್ನು ಪ್ರತಿನಿಧಿಸಿದ್ದರು. ಪ್ರಾಂಶುಪಾಲರಾದ ಮಿಲ್ ಡ್ರೆಡ್ ಗೊನ್ಸಲ್ವೇಸ್, ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ, ಉಪನ್ಯಾಸಕ ಲಾoಛನ್ ಕಾರೇಕರ್ ತರಬೇತಿ ನೀಡಿದ್ದರು.