ಮಡಿಕೇರಿ NEWS DESK ಆ.30 : “ಸಶಕ್ತ ಬಿಜೆಪಿ ವಿಕಸಿತ ಭಾರತ” ಎಂಬ ಧ್ಯೇಯ ವಾಕ್ಯದೊಂದಿಗೆ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಸೆ.1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ 5 ವರ್ಷಗಳಿಗೊಮ್ಮೆ ಬಿಜೆಪಿ ತನ್ನ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ವಿಶ್ವದಲ್ಲೇ 18 ಕೋಟಿ ಸದಸ್ಯರನ್ನು ಹೊಂದಿರುವ ಏಕೈಕ ದೊಡ್ಡ ಪಕ್ಷ ಬಿಜೆಪಿ ಎಂದು ಬಣ್ಣಿಸಿದರು. ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆಯಂತೆ ಈ ಬಾರಿಯ ಸದಸ್ಯತ್ವ ಅಭಿಯಾನದಲ್ಲಿ ಶೇ.30ರಿಂದ 40ಕ್ಕೆ ಸದಸ್ಯತ್ವ ಪ್ರಮಾಣ ಏರಿಕೆ ಮಾಡುವ ಗುರಿ ಹೊಂದಲಾಗಿದೆ. ಕೊಡಗು ಜಿಲ್ಲೆಯಲ್ಲಿ ಈ ಹಿಂದೆ 60 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಹೊಂದಿದ್ದು, ಇದನ್ನು ದ್ವಿಗುಣ ಮಾಡುವ ಗುರಿ ಇದೆ. ಈಗಾಗಲೇ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಲಾಗಿದೆ. ಈ ಸದಸ್ಯತ್ವ ಉಚಿತವಾಗಿದ್ದು, 8800002024 ಮೊಬೈಲ್ ಸಂಖ್ಯೆಗೆ ಮಿಸ್ ಕಾಲ್ ಮಾಡುವ ಮೂಲಕ ಬಿಜೆಪಿ ಪಕ್ಷದ ಸದಸ್ಯರಾಗಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ವಕ್ತಾರರಾದ ತಳೂರು ಕಿಶೋರ್ ಕುಮಾರ್ ಹಾಗೂ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.