ಮಡಿಕೇರಿ NEWS DESK ಆ.30 : ಮಳೆಯಿಂದ ಹಾನಿಯಾಗಿರುವ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಯನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಮಳೆಹಾನಿ ಸಂಬಂಧಿಸಿದಂತೆ ವಿಡಿಯೋ ಸಂವಾದ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಹಾನಿಯಾಗಿದ್ದು, ರಸ್ತೆ ಸರಿಪಡಿಸುವ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಸೂಚಿಸಿದರು. ಹೆಚ್ಚಿನ ಮಳೆಯಿಂದ ಮನೆಗಳು ಹಾನಿಯಾಗಿದ್ದು, ಪರಿಹಾರ ವಿತರಿಸುವುದರ ಜೊತೆಗೆ ಮನೆ ನಿರ್ಮಾಣ ಮಾಡಬೇಕು. ಈ ಸಂಬAಧ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಮಳೆಯಿಂದಾಗಿ ಬರೆಕುಸಿಯುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. ಎಲ್ಲಾ ಹಂತದ ಅಧಿಕಾರಿ ತಮ್ಮ ತಮ್ಮ ವ್ಯಾಪ್ತಿಯ ಕಾರ್ಯಗಳ ಬಗ್ಗೆ ಸರಿಯಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ವಿಡಿಯೋ ಸಂವಾದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.










