ಬೆಂಗಳೂರು
NEWS DESK ಆ.31 : ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ವಾಮಮಾರ್ಗದಲ್ಲಿ ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ರಾಜಭವನ ಚಲೋ ಪ್ರತಿಭಟನೆ ನಡೆಸಿದರು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ಧನ ರೆಡ್ಡಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ರಾಜ್ಯಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗಾಂಧಿ ಪ್ರತಿಮೆಯ ಎದುರು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.