ವಿರಾಜಪೇಟೆ NEWS DESK ಆ.31 : ಬಂಡವಾಳಶಾಹಿ ಶಕ್ತಿಗಳ ಯೋಜನೆಗಳು ಆಧುನಿಕ ಯುಗವನ್ನು ದಾರಿ ತಪ್ಪಿಸಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವ ಜನಾಂಗ ಹಾದಿ ತಪ್ಪುತ್ತಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಕೊಡಗು ಜಿಲ್ಲಾ ಸಂಚಾಲಕಿ ಪಿ.ಎ.ಝೈನಬಾ ರೆಹೆಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಬಹಳ ಕಳವಳಕಾರಿಯಾಗಿವೆ. ಸಮಾಜದಲ್ಲಿ ಹೆಚ್ಚುತ್ತಿರುವ ನಗ್ನತೆ, ಜೂಜು, ಮದ್ಯಪಾನ, ಮಾದಕ ವ್ಯಸನ, ವಿವಾಹೇತರ ಸಂಬAಧಗಳು ಸೇರಿದಂತೆ ಸಮಾಜಿಕ ಪಿಡುಗುಗಳು ಅನೇಕ ಸಮಸ್ಯೆಗಳನ್ನು ಹುಟ್ಟುಹಾಕುತ್ತಿವೆ. ಕುಟುಂಬಗಳು ಛಿದ್ರಗೊಳ್ಳುತ್ತಿವೆ, ಸಮಾಜದ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದರು. ಈ ಸಂದಿಗ್ಧ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲು ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ದೇಶದಾದ್ಯಂತ ಸೆ.1ರಿಂದ 30ರ ವರೆಗೆ ನೈತಿಕತೆಯೇ ಸ್ವಾತಂತ್ರö್ಯ ಎಂಬ ಧ್ಯೇಯ ವಾಕ್ಯದಡಿ ಒಂದು ತಿಂಗಳ ಅಭಿಯಾನವನ್ನು ನಡೆಸಲು ತೀರ್ಮಾನಿಸಿದೆ ಎಂದು ತಿಳಿಸಿದರು. ಸ್ಥಾನೀಯ ಕಾರ್ಯದರ್ಶಿ ಸಮೀರಾ ರಾಝಿಕ್ ಮಾತನಾಡಿ ಧರ್ಮದಲ್ಲಿ ನೈತಿಕತೆಯ ಕಲ್ಪನೆ ಎಂಬ ಶೀರ್ಷಿಕೆಯಡಿ ವಿಚಾರ ಗೋಷ್ಠಿ, ಮಹಿಳಾ ಸಮಾವೇಶ, ಸತ್ಕಾರಕೂಟ, ಶಾಲಾ ಕಾಲೇಜುಗಳಲ್ಲಿ ಉಪನ್ಯಾಸ, ವೈಯಕ್ತಿಕ ಭೇಟಿ, ಸಮಾಜದ ಪ್ರಮುಖ ವ್ಯಕ್ತಿಗಳ ಸಂದರ್ಶನ, ಲೇಖನ-ಭಾಷಣ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಗುವುದು. ಅಭಿಯಾನದ ಅಧಿಕೃತ ಉದ್ಘಾಟನೆ ಸೆ.1ರ ಭಾನುವಾರ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ||.ಮುಹಮ್ಮದ್ ಸಾದ್ ಬೆಳಗಾಮಿ ಅವರು ಬೆಂಗಳೂರಿನಲ್ಲಿ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸ್ಥಾನೀಯ ಶಾಖೆಯ ಕಾರ್ಯಕರ್ತರಾದ ಮುಬೀನಾ ನಾಸಿರ್ ಹಾಗೂ ಜಿ.ಐ.ಓ.ಸಂಘಟನೆಯ ಫಿಧಾ ಸ್ವಾಲಿಹ ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*