ಗೋಣಿಕೊಪ್ಪ NEWS DESK ಆ.31 : ವಿರಾಜಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ ಸದಸ್ಯತ್ವ ಅಭಿಯಾನ ಕಾರ್ಯಗಾರದಲ್ಲಿ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಕೊಡೆಂದೇರ ಬಾಂಡ್ ಗಣಪತಿ, ಕುಂಞಂಗಡ ಅರುಣ್ ಭೀಮಯ್ಯ, ಗುಮ್ಮಟೀರ ಕಿಲನ್ ಗಣಪತಿ, ಹೊಟ್ಟೆಂಗಡ ರಮೇಶ್ ಇವರುಗಳನ್ನು ಭಾರತೀಯ ಜನತಾ ಪಾರ್ಟಿ ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜುಗಣಪತಿ, ತಾಲೂಕು ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಬಯ್ಯ ಸೇರಿದಂತೆ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಇದ್ದರು.